ಪತ್ರಕರ್ತರಿಗೆ ಲಂಚ ವಿಚಾರ : ಗಾಳಿಯಲ್ಲಿ ಗುಂಡು ಎಂದ ಬಿಜೆಪಿ.. ಪಿಎಸ್ಐ ಹಗರಣಕ್ಕೂ ಹೀಗೆ ಹೇಳಿತ್ತು ಎಂದ ಕಾಂಗ್ರೆಸ್..!

 

ಬೆಂಗಳೂರು: ದೀಪಾವಳಿ ಸ್ವೀಟ್ ಬಾಕ್ಸ್ ಜೊತೆಗೆ ಸಿಎಂ ಕಚೇರಿಯಿಂದಾನೆ ಪತ್ರಕರ್ತರಿಗೆ ಲಂಚ ಹೋಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಲೋಕಾಯುಕ್ತಕ್ಕೆ ದೂರು ಸಹ ನೀಡಿದೆ. ಇದೀಗ ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವಿಟ್ಟರ್ ಪ್ರತಿಕ್ರಿಯೆಗಳು ಜೋರಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಕಾಂಗ್ರೆಸ್ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ. ಈ ರೀತಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಈ ಹಿಂದೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಐಫೋನ್ ನೀಡಿರುವುದು ಕಾಂಗ್ರೆಸ್ ಮರೆತಂತಿದೆ ಎಂದು ಟ್ವೀಟ್ ಮಾಡಿದೆ.

ಈ ಟ್ವೀಟ್ ಅನ್ನು ಕಾಂಗ್ರೆಸ್ ರೀಟ್ವೀಟ್ ಮಾಡಿಕೊಂಡಿದ್ದು, ಪಿಎಸ್ಐ ಅಕ್ರಮ ನಡೆದಾಗ, ಬೋರ್ ವೆಲ್ ಅಕ್ರಮ ನಡೆದಾಗ, ಕೆಪಿಟಿಸಿಎಲ್ ಅಕ್ರಮ ನಡೆದಾಗ, ಗಂಗಾ ಕಲ್ಯಾಣ ಹಗರಣ ನಡೆದಾಗಲೂ ಬಿಜೆಪಿ, ಕಾಂಗ್ರೆಸ್ ನ ಗಾಳಿಯಲ್ಲಿ ಗುಂಡು ಎಂದಿತ್ತು. ಆದರೆ ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಇದು ಕೂಡ ಬಯಲಾಗಲಿದೆ. ಗುಂಡು ಗಾಳಿಯನ್ನು ಸೀಳಿಕೊಂಡು ಬರಲಿದೆ ಎಂದು ಉತ್ತರ ನೀಡಿದೆ.

suddionenews

Recent Posts

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

23 minutes ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

4 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

4 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

4 hours ago

ರಂಗಭೂಮಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…

4 hours ago

ಚಿತ್ರದುರ್ಗ : ಯೂನಿಯನ್ ಪಾರ್ಕ್ ಬಳಿ ಅನಾಮಧೇಯ ಶವ ಪತ್ತೆ

ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್‍ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…

5 hours ago