Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆದವರ ಪತ್ತೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಅಭಿಯಾನ : ಬಿ.ಕೆ ಹರಿಪ್ರಸಾದ್

---Advertisement---

ಬೆಂಗಳೂರು.ಆಗಸ್ಟ್.9 : ರಾಜ್ಯದಲ್ಲಿ ಚುನಾವಣೆ ಆಯೋಗವು ಕೈಗೆತ್ತಿಕೊಂಡಿರುವ ವಿಶೇಷ ಮತಪಟ್ಟ ಪರಿಷ್ಕರಣೆ (ಎಸ್‌ಐಆರ್‌) ವೇಳೆ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ಕಾರಣಗಳಿಂದ ಸುಮಾರು 63 ಲಕ್ಷ ಮತದಾರರು ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಇಂತಹ ಮತದಾರರ ಪರಿಶೀಲನೆ ನಡೆಸಿ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ ಜಾಗೃತಿ ಅಭಿಯಾನ ಆರಂಭಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರು, ಅಲ್ಪಸಂಖ್ಯಾತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗದ ಅನಕ್ಷರಸ್ಥರಲ್ಲಿ ಜಾಗೃತಿ ಮೂಡಿಸಲು ಪಕ್ಷದ ಸಂಯೋಜಕರು ಶ್ರಮಿಸಲಿದ್ದಾರೆ. 63 ಲಕ್ಷ ಮತದಾರರ ಸಂಖ್ಯೆ ದೊಡ್ಡದಾಗಿದ್ದು, ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ವಹಿಸಲಾಗುವುದು ಎಂದರು.

Join WhatsApp

Join Now

Join Telegram

Join Now