ಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಮಟ್ಟದಲ್ಲಿಯೇ ಸ್ಪರ್ಧೆ ನಡೆದಿತ್ತು. ಇಂದು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. 10,321 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಅವರು 43,528 ಮತಗಳನ್ನ ಪಡೆದುಕೊಂಡು ಹಿನ್ನಡೆ ಸಾಧಿಸಿದ್ದಾರೆ.
ಬಾಗಲಕೋಟೆ ಗೆಲುವಿಗಾಗಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಾಕಷ್ಟು ಓಡಾಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದ್ದರು. ಬಿಜೆಪಿ ನಾಯಕರು ಕೂಡ ಅಷ್ಟೇ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿದ್ದರು. ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿ ಚರಂತಿ ಮಠ ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಇದೀಗ ಸುಮಾರು ಹತ್ತು ಸಾವಿರಗಳ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹನ್ನಡೆ ಸಾಧಿಸಿದ್ದಾರೆ.


















