ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಸಿಟಿ ರವಿ ಈ ಬಾರಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಗೆಲುವು ಕಂಡಿದ್ದಾರೆ. ಆದರೆ ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಗೆ ಹಾಲಿನ ಅಭಿಷೇಕ ಮಾಡಲಾಗಿದೆ. ಅದಕ್ಕೆ ಕಾರಣವೂ ಇದೆ.

ಸಿಟಿ ರವಿಯನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿ ಬೆಂಬಲ ಜಾಸ್ತಿ ಇತ್ತು. ಜೆಡಿಎಸ್ ಎಂಎಲ್ಸಿ ಭೋಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಬಹಿರಂಗವಾಗಿ ಪ್ರಚಾರ ಮಾಡಿದ್ದರು. ಫಲಿತಾಂಶ ಕೂಡ ಕಾಂಗ್ರೆಸ್ ಪರವೇ ಬಂದಿದೆ. ಸಿಟಿ ರವಿ ಹೀನಾಯವಾಗಿ ಸೋತಿದ್ದಾರೆ. ಹೀಗಾಗಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಭೋಜೇಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪರಮಾಪ್ತರಾಗಿದ್ದವರು. ಕಾಂಗ್ರೆಸ್ ಜೊತೆ ಮೊದಲೇ ಒಪ್ಪಂದ ಮಾಡಿಕೊಂಡಿದ್ದರಿಂದ, ಅವರಿಗೆ ಬೆಂಬಲ ನೀಡಲಾಗಿತ್ತು. ಗೆದ್ದ ಕೂಡಲೇ ನಗರದ ಹೊಸಮನೆ ಬಡಾವಣೆಯಲ್ಲಿರುವ ಭೋಜೇಗೌಡ ಅವರಿಗೆ ಹಾಲಿನ ಅಭಿಷೇಕ ಮಾಡಿ, ಹೂವಿನ ಹಾರ ಹಾಕಿ ಸನ್ಮಾನ ಮಾಡಲಾಗಿದೆ.

