Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನಗೂಳಿ ಸಾಧನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಲಾಗದು: ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

ಸಿಂಧಗಿ: ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯ ಗತಿ ಇಲ್ಲದೆ ಮನಗೂಳಿ ಕಾಕಾ ಅವರ ಪುತ್ರನನ್ನು ಹೈಜಾಕ್ ಮಾಡಿ ಅಭ್ಯರ್ಥಿ ಮಾಡಿರಬಹುದು. ಆದರೆ, ಕಾಕಾ ಅವರ ಜನಪ್ರಿಯತೆ, ಅವರು ಮಾಡಿದ ಸೇವೆ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಜೆಡಿಎಸ್ ಕೊಟ್ಟಿರುವ ಕೊಡುಗೆಯನ್ನು ಹೈಜಾಕ್ ಮಾಡಲಾಗದು ಎಂದು ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷಕ್ಕೆ ಕಿಡಿಕಾರಿದರು.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ, ಜಾತ್ಯಾತೀತ ಜನತಾದಳ ಮತ್ತು ಸಿಂಧಗಿ ಕ್ಷೇತ್ರದ ನಡುವೆ ವಾತ್ಸಲ್ಯಪೂರ್ಣವಾದ ಕರುಳುಬಳ್ಳಿಯ ಸಂಬಂಧ ಇದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಸುಮಾರು ಮೂವತ್ತು ವರ್ಷಗಳ ಕಾಲ ದಿವಂಗತ ಮನಗೂಳಿ ಕಾಕಾ ಅವರು ದೇವೇಗೌಡರ ಕುಟುಂಬದ ಸದಸ್ಯರಂತೆ ಇದ್ದರು. ಅವರನ್ನು ದೇವೇಗೌಡರು ಸ್ವಂತ ಸಹೋದರನಂತೆ ನೋಡುತ್ತಿದ್ದರು. ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಸಲ ಗೆದ್ದ ಅವರನ್ನು ಎರಡೂ ಸಲವೂ ಪಕ್ಷ ಮಂತ್ರಿ ಮಾಡಿತ್ತು ಎಂದು ಕುಮಾರಸ್ವಾಮಿ ಅವರು ನೆನಪು ಮಾಡಿಕೊಂಡರು.

ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಆಗಿದ್ದಾಗ ದೇವೇಗೌಡರು ಸಿಂಧಗಿ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ನೀಡಿದ್ದರು. ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದರು. ಅದಕ್ಕೆ ಕುರುಹಾಗಿ ದೇವೇಗೌಡರು ಮತ್ತು ಮನಗೂಳಿ ಅವರಿಬ್ಬರ ಪ್ರತಿಮೆಗಳನ್ನು ಜನರು ಕೃತಜ್ಞತಾಪೂರ್ವಕವಾಗಿ ಇಲ್ಲಿ ಸ್ಥಾಪನೆ ಮಾಡಿದ್ದಾರೆ. ಇಂಥ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳುವ ಅದೃಷ್ಟ ನನ್ನದು ಎಂದು ಕುಮಾರಸ್ವಾಮಿ ಹೇಳಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗಲೂ ನೀರಾವರಿ ಯೋಜನೆಗಳು ಸೇರಿ ಹತ್ತಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇನೆ.

ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಯಾವ ನಾಲಿಗೆಯಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎನ್ನುತ್ತಿದ್ದರೂ ಅದೇ ನಾಯಕರೂ ಕಳೆದ ಚುನಾವಣೆ ನಂತರ ಸರಕಾರ ಮಾಡಬೇಕು ಎಂದು ನಮ್ಮ ಪಕ್ಷದ ಬಾಗಿಲಲ್ಲಿ ನಿಂತಿದ್ದರು.
ಯಾರು ನಮ್ಮ ಪಕ್ಷಕ್ಕೆ ಮತ ಹಾಕಬೇಡಿ ಎಂದು ಜನರಿಗೆ ಹೇಳಿದರೋ ಅವರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ದೇವೇಗೌಡರ ಮನೆ ಮುಂದೆ ನಿಂತರು. ಆದರೆ, ಸಿದ್ದರಾಮಯ್ಯ ಅವರ ಸುಳ್ಳು ಮಾತುಗಳಿಂದ ನಮ್ಮ ಪಕ್ಷಕ್ಕೆ ಆ ಚುನಾವಣೆಯಲ್ಲಿ ಹಾನಿ ಆಯಿತು ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಅಷ್ಟಕ್ಕೇ ಸುಮ್ಮನಾಗದ ಸಿದ್ದರಾಮಯ್ಯ ಈಗ ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಸೆಕ್ಯುಲರ್ ಮತಗಳನ್ನು ವಿಭಜಿಸಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಸರಣಿ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

ಯಾವ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬಾರದು ಎಂದು ಜನತೆಯನ್ನು ಕೋರಿದ ಹೆಚ್ ಡಿಕೆ ಅವರು, ಒಂದು ವೇಳೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ಅದರ ಫಲ ಬಿಜೆಪಿಗೆ ಹೋಗುತ್ತದೆ. ಈ ಕಾರಣಕ್ಕೆ ಜೆಡಿಎಸ್ ಸಿಂಧಗಿ ಜನರ ಸಹಜ ಆಯ್ಕೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!