ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಜಾರಿಗೆ ತಂದ ಬಳಿಕ ಬಿಜೆಪಿ ನಾಯಕರನ್ನು ಟ್ಯಾಗ್ ಮಾಡಿ ನಿಮಗೂ ಉಚಿತ ಎಂದು ಹೇಳಿತ್ತು. ಬಿಹೆಪಿಯವರು ಆ ಟ್ಬೀಟ್ ಗೆ ಮರು ಟ್ವೀಟ್ ಮಾಡಿ, ತಿರುಗೇಟು ನೀಡಿದ್ದರು.
ಖಂಡಿತಾ ಸ್ವಾಮಿ… ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ @RahulGandhiಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ ಎಂದು ಟ್ವೀಟ್ ಮಾಡಿದ್ದರು. ಇಂದು ಆ ಟ್ವೀಟ್ ಗೆ ಕಾಂಗ್ರೆಸ್ ಮತ್ತೊಮ್ಮೆ ತಿರುಗೇಟು ನೀಡಿದೆ.
‘@BJP4Karnataka, ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, @Dr_Yathindra_S ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. @smritiirani ಅವರ ಪದವಿ ಹುಡುಕಿ ತನ್ನಿ, ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ “ಎಂಟೈರ್ ಪೊಲಿಟಿಕಲ್ ಸೈನ್ಸ್” ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ ಸೂ – ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ) ಎಂದು ಟ್ವೀಟ್ ಮೂಲಕ ಪದವಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ.