ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೊ ಅವರು ಶನಿವಾರ (ಆ. 27) ಇಟಲಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಇನ್ನು ನಿಧನರಾಧ ದಿನದಂದೆ ಅಂತ್ಯಕ್ರಿಯೆ ಕೂಡ ನೆರವೇರಿತು ಎಂದು ರಮೇಶ್ ತಿಳಿಸಿದರು.
ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರ ತಾಯಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಸೋನಿಯಾ ಗಾಂಧಿ ಜಿ ಅವರ ತಾಯಿ ಶ್ರೀಮತಿ ಪಾವೊಲಾ ಮೈನೊ ಅವರ ನಿಧನಕ್ಕೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಇಡೀ ಕುಟುಂಬದೊಂದಿಗೆ ಇರುತ್ತವೆ” ಎಂದಿದ್ದಾರೆ.
ಸೋನಿಯಾ ಗಾಂಧಿ ಆಗಸ್ಟ್ 23 ರಂದು ತಮ್ಮ 90ರ ವಯಸ್ಸಿನ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಭೇಟಿ ಮಾಡಲು ತೆರಳಿದ್ದರು. ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ವಿದೇಶದಲ್ಲಿದ್ದು, ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.