2023ರ ಚುನಾವಣೆಯಲ್ಲಿ ಶತಾಯಗತಾಯ ಗೆಲುವು ತಮ್ಮದಾಗಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಪಣ ತೊಟ್ಟಿದ್ದರೆ. ಅದರ ನಡುವೆ ನನ್ನ ಬಿಟ್ಟು ಸಿಎಂ ಆಗುವುದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಕೂಡ ಈ ಬಾರಿಯ ಗೆಲುವಿನ ಲೆಕ್ಕಚಾರವಾಕಿದೆ. ಆದರೆ ಎರಡು ರಾಷ್ಟ್ರೀಯ ಪಕ್ಷಕ್ಕಿಂತ ಮೊದಲೇ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದೆ.
ಇದೀಗ ಕಾಂಗ್ರೆಸ್ ಕೂಡ ಇದೇ ಹಾದಿಯಲ್ಲಿ ನಡೆಯಲು ನಿರ್ಧರಿಸಿದೆ ಎನ್ನಲಾಗಿದೆ. ಆರು ತಿಂಗಳ ಮೊದಲೇ ಅಭ್ಯರ್ಥಿಗಳ ಘೋಷಣೆ ಮಾಡುವ ಬಗ್ಗೆ ಸಭೆ ನಡೆದಿದೆ. ಆ ಸಭೆಯಲ್ಲಿ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳ ಈಗಾಗಲೇ ಪಟ್ಟಿ ತಯಾರಿಸಿದ್ದಾರಂತೆ. ಈ ಪಟ್ಟಿಯನ್ನು ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆಯಂತೆ.
ಆರು ತಿಂಗಳ ಮುನ್ನವೇ ಟಿಕೆಟ್ ಘೋಷಣೆ ಮಾಡುವುದು ಪಕ್ಷದಲ್ಲಿಯೇ ಕೆಲವರಿಗೆ ಇಷ್ಟವಿರಲಿಲ್ಲ. ಆದರೆ ಅದರ ಲಾಭವನ್ನು ಮನಗಂಡಿರುವ ಹೈಕಮಾಂಡ್ ಇದಕ್ಕೆ ಒಪ್ಪಿಗೆ ನೀಡಿದೆ. ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದರಿಂದ ಪ್ರಚಾರ ಕಾರ್ಯ ಭರದಿಂದ ಸಾಗುತ್ತದೆ. ಜೊತೆಗೆ ಬಂಡಾಯವೆದ್ದರೆ ಮೊದಲೇ ಎದ್ದೇಳುತ್ತಾರೆ. ಬಳಿಕ ಬಂಡಾಯ ಶಮನ ಮಾಡುವುದೋ ಬೇರೆ ಮಾರ್ಗ ಹಿಡಿಯುವುದೋ ಪ್ಲ್ಯಾನ್ ಮಾಡುವುದಕ್ಕೆ ಸಮಯ ಸಿಗುತ್ತದೆ ಎಂಬುದು ಕಾಂಗ್ರೆಸ್ ಪ್ಲ್ಯಾನ್ ಎಂದು ಬಲ್ಲ ಮೂಲಗಳು ತಿಳಿಸಿವೆ.