ಬೆಂಗಳೂರು: ರಾಷ್ಟ್ರ ಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸುವ ಬಗ್ಗೆ ಈಶ್ವರಪ್ಪ ಮಾತಾಡಿದಾಗಿನಿಂದ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ರೊಚ್ಚಿಗೆದ್ದು ಪ್ರತಿಭಟಿಸುತ್ತಿದ್ದಾರೆ. ಇಂದು ಕೂಡ ಪ್ರತಿಭಟನೆ ನಡೆಸಿದ್ದು, ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ, ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಲಾಪ ಮುಂದೂಡಿಕೆ ಮಾಡಲಾಗಿದೆ. ಆದರೂ ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ವಿಧಾನಸಭೆಯಲ್ಲೇ ಬೀಡು ಬಿಟ್ಟಿದ್ದಾರೆ.
ಈ ಸಂಬಂಧ ಸ್ಪೀಕರ್ ಕಾಗೋಡು ಅವರು ಕಾಂಗ್ರೆಸ್ ನಾಯಕರಿಗೆ ಸಹಾಯ ಮಾಡಲು ಸೂಚಿಸಿದ್ದಾರೆ. ಪ್ರತಿಭಟನಾನಿರತ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ, ಮಲಗುವ ವ್ಯವಸ್ಥೆ ಮಾಡಲು ಸ್ಪೀಕರ್ ಸೂಚಿಸಿದ್ದಾರೆ. ಈಶ್ವರಪ್ಪ ಅವರು ರಾಜೀನಾಮೆ ನೀಡಲೇಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.