Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಳ್ಳಕೆರೆ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.18): ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆಂದು ಜಿಲ್ಲಾ ಕಾಂಗ್ರೆಸ್‍ನಿಂದ ಉಪವಿಭಾಗಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ತಹಶೀಲ್ದಾರ್ ಎನ್.ರಘುಮೂರ್ತಿ ಸರ್ಕಾರಿ ಅಧಿಕಾರಿ ಎನ್ನುವುದನ್ನು ಮರೆತು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು, ಫ್ಲೆಕ್ಸ್‍ಗಳಲ್ಲಿ ಫೋಟೋಗಳನ್ನು ಹಾಕಿಸಿಕೊಂಡಿರುವುದು ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಜೆರಾಕ್ಸ್ ಸೇರಿದಂತೆ ಅನೇಕ ದಾಖಲೆಗಳನ್ನು ಉಪವಿಭಾಗಾಧಿಕಾರಿಗೆ ನೀಡಿ ಕಾನೂನು ಅಡಿ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರುಗಳು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ನಾಗರಾಜ್‍ ಜಾನ್ಹವಿ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಅಂಜಿನಪ್ಪ, ಆರ್.ಶೇಷಣ್ಣಕುಮಾರ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಸೈಯದ್ ಖುದ್ದೂಸ್, ಬಾಬು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಅಶೋಕ್‍ನಾಯ್ಡು, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Join WhatsApp

Join Now

Join Telegram

Join Now

Leave a Comment