ಸುದ್ದಿಒನ್ ಡೆಸ್ಕ್
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಜಯ ಸಾಧಿಸಿದೆ.
ಎಕ್ಸಿಟ್ ಪೋಲ್‌ಗಳ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಒಟ್ಟು 136 ಸ್ಥಾನಗಳು ಲಭಿಸಿವೆ. ಕಾಂಗ್ರೆಸ್ ಬೆಂಬಲಿತ ಮೇಲುಕೋಟೆಯ ದರ್ಶನ್ ಪುಟ್ಟಣ್ಣಯ್ಯ ಸೇರಿ ಒಟ್ಟು 137 ಸ್ಥಾನಗಳು ಲಭಿಸಿವೆ. ಕರಾವಳಿ ಕರ್ನಾಟಕ ಮತ್ತು ಬೆಂಗಳೂರು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 65 ಸ್ಥಾನಗಳಿಗೆ ಕುಸಿದಿದೆ. 19 ರಲ್ಲಿ ಜೆಡಿಎಸ್ ಮತ್ತು ಇತರೆ 4 ಸ್ಥಾನ ಗಳಿಸಿವೆ.
ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷವೊಂದು ಈ ಮಟ್ಟದ ಬಹುಮತ ಪಡೆದಿರುವುದು 34 ವರ್ಷಗಳಲ್ಲಿ ಇದೇ ಮೊದಲು ಎಂಬುದು ಗಮನಾರ್ಹ. 1989 ರಲ್ಲಿ ಕಾಂಗ್ರೆಸ್ 178 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ನಂತರ 1994ರಲ್ಲಿ ಜನತಾದಳ 115 ಸ್ಥಾನಗಳನ್ನು ಪಡೆದಿತ್ತು. 1999ರಲ್ಲಿ ಮತ್ತೆ ಕಾಂಗ್ರೆಸ್ 132 ಸ್ಥಾನಗಳನ್ನು ಗೆದ್ದಿತ್ತು. 2013ರಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು.