Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರ ವಿಫಲ : ವಿಜಯೇಂದ್ರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 30 : ತಾವಿನ್ನೂ ಮೊದಲ ಬಾರಿಗೆ ಶಾಸಕರಾಗಿರಬಹುದು, ಆದರೆ ಹರಿಪ್ರಸಾದ್ ಅವರು ಡಾಕ್ಟರೇಟ್ ಪಡೆದಿದ್ದರೂ ಇದುವರೆಗೆ ಯಾವುದೇ ಚುನಾವಣೆಯಲ್ಲಿ ಗೆದ್ದಿಲ್ಲ ಕಾರ್ಯಕರ್ತರ ಮೂಲಕ ತಮಗೇ ಬ್ಯಾನರ್ ಹರಿದುಕೊಳ್ಳುವಂತೆ ಹೇಳಿ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೀಳುಮಟ್ಟದ ರಾಜಕೀಯ ತಮಗೆ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹೇಳಿದರು.

ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರ ಪಾದಯಾತ್ರೆ, ಬ್ಯಾನರ್ ವಿವಾದ ಹಾಗೂ ಪ್ರಮುಖ ನಾಯಕರ ಹೇಳಿಕೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ ಬಿಜೆಪಿ ನಡೆಸಿದ 10 ದಿನಗಳ ಬೃಹತ್ ಪಾದಯಾತ್ರೆಯ ಯಶಸ್ಸಿನಿಂದ ಪ್ರೇರಣೆಗೊಂಡು ಕಾಂಗ್ರೆಸ್ ನಾಯಕರು ಶಿಕಾರಿಪುರದಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ ಎಂದು ಅವರು ವ್ಯಂಗ್ಯವಾಡಿದ ಅವರು. ಶಿಕಾರಿಪುರ ತಾಲೂಕು ಹೋರಾಟದ ಹಾದಿಗೆ ಹೆಸರುವಾಸಿಯಾಗಿದೆ. ಬಿ. ಎಸ್. ಯಡಿಯೂರಪ್ಪನವರಿಗೆ ರಾಜಕೀಯ ಜನ್ಮ ನೀಡಿದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ಅವರಿಗೆ ಒಳ್ಳೆಯದಾಗಲಿ ಎಂದು ವಿಜಯೇಂದ್ರ ಹೇಳಿದರು.

ಯಡಿಯೂರಪ್ಪ ಕುಟುಂಬದ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನಿಡುತ್ತಾ ಬಿ. ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲಿನ ಲಂಚದ ಆರೋಪಗಳು ಈಗಾಗಲೇ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ನಿರಪರಾಧಿ ಎಂದು ಸಾಬೀತಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲೇ ಈ ತನಿಖೆ ನಡೆದಿದೆ ಎಂದ ಅವರು, ಹತಾಶೆಯಿಂದ ಕಾಂಗ್ರೆಸ್ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಒಳಗಿನ ಭಿನ್ನಮತ ಮತ್ತು ಸರ್ಕಾರದ ವೈಫಲ್ಯ: ಕಾಂಗ್ರೆಸ್‍ನಲ್ಲಿ ಶಕ್ತಿ ಪ್ರದರ್ಶನ ಹಾಗೂ ಆಂತರಿಕ ಭಿನ್ನಮತ ಎದ್ದು ಕಾಣಿಸುತ್ತಿದೆ. ಬರ ಕಾಲದ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಜನರು ಹಾಗೂ ರೈತರು ಈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ರಾಜ್ಯದ ಜನತೆಯೇ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ಹಿರಿಯೂರು ಉಪ ಚುನಾವಣೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಆಯ್ಕೆ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now