Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂದಿನಿ ಹಾಲು 8 ರೂ. ಏರಿಸಿ ಬಡವರ ಗಾಯದ ಮೇಲೆ ಬರೆ ಎಳೆದ ಕಾಂಗ್ರೆಸ್ ಸರ್ಕಾರ : ಭಾರ್ಗವಿ ದ್ರಾವಿಡ್ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 31 : ನಂದಿನಿ ಹಾಲಿನ ಬೆಲೆಯನ್ನು ನವೆಂಬರ್ 1 ರಿಂದ ಪ್ರತಿ ಲೀಟರ್‍ಗೆ ಎಂಟು ರೂ.ಗಳನ್ನು ಹೆಚ್ಚಿಸಲು ನಿರ್ಧಾರ ಕೈಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಬಿಜೆಪಿ.ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಎನ್.ಬಿ.ಭಾರ್ಗವಿ ದ್ರಾವಿಡ್ ತೀವ್ರವಾಗಿ ಖಂಡಿಸಿದ್ದಾರೆ.

ರೈತರನ್ನು ಪ್ರೋತ್ಸಾಹಿಸುವ ನೆಪದಲ್ಲಿ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಸುವ ನಿರ್ಧಾರ ತೆಗೆದುಕೊಂಡು ಜನಸಾಮಾನ್ಯರು, ಮಧ್ಯಮ ಹಾಗೂ ಬಡ ವರ್ಗದವರಿಗೆ ಆರ್ಥಿಕ ಹೊರೆ ಹೇರಿದೆ. ಬಡವನಿಂದ ಹಿಡಿದು ಸಿರಿವಂತರವರೆಗೆ ಪ್ರತಿಯೊಂದು ಕುಟುಂಬಕ್ಕೂ ದಿನನಿತ್ಯವೂ ಅಗತ್ಯವಾಗಿ ಬೇಕಾಗಿರುವ ಹಾಲಿನ ಬೆಲೆ ಹೆಚ್ಚಳ ಜನ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ದಿನಗೂಲಿ ಕಾರ್ಮಿಕರು, ಆಟೋ ಚಾಲಕರು, ಸಣ್ಣ ಸಣ್ಣ ವ್ಯಾಪಾರಿಗಳು ಕಡಿಮೆ ಆದಾಯದಲ್ಲಿ ಕುಟುಂಬ ನಿರ್ವಹಣೆ ಮಾಡುತ್ತಿರುವವರಿಗೆ ಹಾಲಿನ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಒಂದು ಕುಟುಂಬ ದಿನಕ್ಕೆ ಎರಡು ಲೀ. ಹಾಲು ಖರೀಧಿಸಿದರೆ ತಿಂಗಳಿಗೆ 480 ರೂ.ಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗುತ್ತದೆ. ಬಡ ಕುಟುಂಬಗಳಿಗೆ ಇದು ಸಣ್ಣ ಮೊತ್ತವಲ್ಲ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಹಾಲು ಕೊಡಬೇಕೋ ಇಲ್ಲ ಇತರೆ ಅಗತ್ಯ ವಸ್ತುಗಳನ್ನು ಪೂರೈಸಬೇಕೋ ಎನ್ನುವ ಚಿಂತೆಯಲ್ಲಿದ್ದಾರೆ. ಹೈನುಗಾರರ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವೇನೋ ನಿಜ. ಆದರೆ ಗ್ರಾಹಕರ ಮೇಲೆ ಭಾರ ಹೊರಿಸುವುದು ತರವಲ್ಲ. ರೈತರಿಗೆ ಆರ್ಥಿಕ ಶಕ್ತಿ ತುಂಬುವುದರ ಜೊತೆ ಬಡ ಕುಟುಂಬಗಳಿಗೆ ಹಾಲಿನ ಮೇಲೆ ವಿಶೇಷ ರಿಯಾಯಿತಿ ಅಥವಾ ಸಬ್ಸಿಡಿ ನೀಡುವ ವ್ಯವಸ್ಥೆಯನ್ನು ರೂಪಿಸುವುದರ ಜೊತೆಗೆ ಜನಸಾಮಾನ್ಯರ ಕಷ್ಟಗಳನ್ನು ಅರ್ಥಮಾಡಿಕೊಂಡು ರೈತರಿಗೂ, ಗ್ರಾಹಕರಿಗೂ ನ್ಯಾಯ ಒದಗಿಸುವ ಮಾರ್ಗವನ್ನು ಕಂಡುಕೊಳ್ಳಬೇಕೆಂದು ಎನ್.ಬಿ.ಭಾರ್ಗವಿ ದ್ರಾವಿಡ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now