ಬೆಳಗಾವಿ.ಜುಲೈ.10: ಪಕ್ಷದಲ್ಲಿ ಪಂಚಾಯಿತಿ ಮಟ್ಟದಿಂದ ಹಿಡಿದು ಪಾರ್ಲಿಮೆಂಟ್ವರೆಗೂ ಸಮರ್ಥ ನಾಯಕರನ್ನು ತಯಾರು ಮಾಡುವುದೇ ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ನೀಡಿದ ಸಹಕಾರವನ್ನು ಸಿಎಂ ಮುಕ್ತಕಂಠದಿಂದ ಶ್ಲಾಘಿಸಿದರು. “ತಾವೆಲ್ಲರೂ ಜನರ ಹೃದಯವನ್ನು ಗೆದ್ದು, ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿದ್ದೀರಿ. ಚುನಾವಣಾ ಸಮಯದಲ್ಲಿ ಜನರಿಗೆ ಕೊಟ್ಟ ಮಾತನ್ನು ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಉಳಿಸಿಕೊಂಡಿದೆ. ನಾನು 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದರೂ, ಕೊನೆಗೆ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎನ್ನುವುದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
ಸಿದ್ದರಾಮಯ್ಯನವರು ಕಳೆದ 8 ವರ್ಷಗಳಿಂದ ಈ ರಾಜ್ಯಕ್ಕೆ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಜೊತೆಗೆ ಪಕ್ಷ ಸಂಘಟನೆಗೂ ಅಪಾರ ಶಕ್ತಿ ತುಂಬಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಸಿದ್ದರಾಮಯ್ಯನವರ ಜೊತೆಗೂಡಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
“ಪಂಚಾಯಿತಿಯಿಂದ ಪಾರ್ಲಿಮೆಂಟ್ವರೆಗೂ ನಾಯಕರಿರಬೇಕು”
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತಾವೆಲ್ಲರೂ ಸಹಕರಿಸಿದ್ದೀರಿ. ಜನರ ಹೃದಯವನ್ನು ಗೆದ್ದು ಅಧಿಕಾರಕ್ಕೆ ಬರಲು ಶ್ರಮಿಸಿದ್ದೀರಿ. ಕೊಟ್ಟ ಮಾತನ್ನು… pic.twitter.com/xcF1ciZ8ov
— DK Shivakumar (@DKShivakumar) July 9, 2026










