Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಶಾಸಕ ಯತ್ನಾಳ್ ಶಾಕಿಂಗ್ ಹೇಳಿಕೆ

---Advertisement---

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಒಂದು ಕಡೆ ಜೋರಾಗಿದೆ. ಸ್ಟ್ರಾಂಗ್ ಕ್ಯಾಂಡಿಡೇಟ್ ಗಳನ್ನೇ ಕಾಂಗ್ರೆಸ್ ಟಾರ್ಗೆಟ್ ಮಾಡಿದೆ. ಹೇಗಾದರೂ ಸರಿ ಈ ಬಾರಿ ರಾಜ್ಯದಲ್ಲೂ ಹೆಚ್ಚಿನ ಸೀಟುಗಳನ್ನು ಗೆಲ್ಲುವ ಹಠ ಕಾಂಗ್ರೆಸ್ ನವರದ್ದು. ಅದೆಂತೆ ಬಿಜೆಪಿ ಕೂಡ ಈ ಬಾರಿ ಗೆಲುವಿಗಾಗಿ ಹಂಬಲಿಸುತ್ತಿದೆ.

ಅದಕ್ಕಾಗಿಯೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಮೈತ್ರಿ ಮೂಲಕ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕು ಎಂದುಕೊಂಡಿದೆ. ಬಿಜೆಪಿ ನಾಯಕರು ಆಗಾಗ ಹೇಳುತ್ತಾ ಇದ್ದಾರೆ. ನಮ್ಮ ಸಂಪರ್ಕದಲ್ಲೂ ಸಾಕಷ್ಟು ಶಾಸಕರಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ಅದು ಜಾಸ್ತಿ ಹೊತ್ತಿನ ಕೆಲಸವೇನು ಅಲ್ಲ ಎಂದೇ ಹೇಳಿದ್ದಾರೆ.

ಇದೀಗ ಇದೇ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಮಾತನಾಡಿದ್ದಾರೆ. ಶಾಕಿಂಗ್ ಎನಿಸುವಂತ ಹೇಳಿಕೆಯನ್ನೇ ನೀಡಿದ್ದಾರೆ. ಎಂಎಲ್ಸಿ ಬಿಕೆ ಹರಿಪ್ರಸಾದ್ ರನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ಜನವರಿ ನಂತರ ಕಾಂಗ್ರೆಸ್ ಸರ್ಕಾರ ಪತನ ಖಚಿತ. ನಮ್ಮ ಸಂಪರ್ಕದಲ್ಲಿಯೂ 45 ಶಾಸಕರಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...