ಚಿತ್ರದುರ್ಗ, (ಮಾ.04) : ಕಾಂಗ್ರೆಸ್ ನವರಿಗೆ ನವರಿಗೆ ರಾಜೀನಾಮೆ ಕೇಳುವ ಮತ್ತು ಪ್ರತಿಭಟನೆ ಮಾಡುವ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರದ್ದೇ ಸಚಿವರೊಬ್ಬರ ಕಚೇರಿಯಲ್ಲಿ 2 ಲಕ್ಷ ರೂ.ಹಣ ಸಿಕ್ಕಿತ್ತು. ಆಗ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಾ ? ಬದಲಾಗಿ
ಲೋಕಾಯುಕ್ತ ಸಂಸ್ಥೆಯನ್ನೇ ಅವರು ಮುಚ್ಚಿ ಹಾಕಿದ್ದರು. ಒಂದು ವೇಳೆ ಅಂದು ಲೋಕಾಯುಕ್ತ ಸಂಸ್ಥೆ ಇದ್ದಿದ್ದರೆ ಅವರ ಬಂಧನವಾಗುತ್ತಿತ್ತು ಎಂದು ಹೇಳಿದರು.
ನಮ್ಮ ಮೇಲೆ ಆರೋಪ ಮಾಡಿದ ಮಾತ್ರಕ್ಕೆ ಅವರು ಪಾಪ ಕಳೆದುಕೊಳ್ಳಲು ಸಾಧ್ಯವಿಲ್ಲ.
ಈ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ ಎಂದರು.
ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೊಮ್ಮಾಯಿ ತಿಳಿಸಿದರು.