Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀಟ್ ಅಕ್ರಮ ಖಂಡಿಸಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮೇಣದ ಬತ್ತಿ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ವಿರುದ್ದ ದೆಹಲಿಯಲ್ಲಿ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‍ನಿಂದ ಗಾಂಧಿ ವೃತ್ತದಲ್ಲಿ ಶನಿವಾರ ಮೇಣದ ಬತ್ತಿ ಮೆರವಣಿಗೆ ನಡೆಯಿತು. ಮೇಣದ ಬತ್ತಿ ಹಚ್ಚಿಕೊಂಡು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

 

ಪ್ರತಿಭಟನೆಯುದ್ದೇಶಿಸಿ ದ್ರಾಕ್ಷಾ ರಸ ಮಂಡಳಿ ಚೇರ್ಮನ್ ಬಿ.ಯೋಗೇಶ್‍ಬಾಬು ಮಾತನಾಡಿ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ತಲೆದಂಡವಾಗಿದೆ. ಕೇವಲ ಅವರ ರಾಜಿನಾಮೆಯಿಂದ ನಾವುಗಳು ಸುಮ್ಮನಿರುವುದಿಲ್ಲ ಸಂಸತ್ ಸ್ಥಾನದಿಂದ ವಜಾಗೊಳಿಸಿ ಪ್ರಧಾನಿ ನರೇಂದ್ರಮೋದಿ ದೇಶದ ಜನರ ಕ್ಷಮೆ ಯಾಚಿಸಬೇಕು. ಅಲ್ಲಿಯವರೆಗೂ ದೇಶಾದ್ಯಂತ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

 

ಪ್ರಧಾನಿ ಮೋದಿರವರ ನಿವಾಸದ ಎದುರು ಧರಣಿಗಿಳಿದ ರಾಹುಲ್‍ಗಾಂಧಿಯನ್ನು ಬಂಧಿಸಿರುವುದು ಪ್ರಜಾಪ್ರಭುತ್ವದಲ್ಲಿ ಸ್ವಾತಂತ್ರ್ಯ ಹರಣವಾಗುತ್ತಿದೆ. ಕೇಂದ್ರ ಸರ್ಕಾರ ಐಟಿ, ಇಡಿ ಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪರೀಕ್ಷಾಪೇ ಚರ್ಚೆ ಸಂವಾದ ನಡೆಸುತ್ತಿರುವ ಪ್ರಧಾನಿ ಮೋದಿರವರು ನೀಟ್ ಅಕ್ರಮದ ಬಗ್ಗೆ ಏಕೆ ತನಿಖೆಗೆ ಆದೇಶಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ರಾಜಕೀಯ ದಬ್ಬಾಳಿಕೆಯನ್ನು ಯಾರು ಸಹಿಸುವುದಿಲ್ಲ ಎಂದರು.

 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಕೇಸ್‍ಗಳನ್ನು ಹಿಂದಕ್ಕೆ ಪಡೆದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

 

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಮಾಜಿ ಸಂಸದರಾದ ವಿಪಿನ್ ಬೊಹರಾ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ನಜ್ಮತಾಜ್, ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಎ.ಸಾಧಿಕ್‍ವುಲ್ಲಾ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದಿನ್, ಪರಿಶಿಷ್ಟ ವರ್ಗಗಳ ವಿಭಾಗದ ಅಧ್ಯಕ್ಷ ಮಂಜುನಾಥ್, ಗ್ಯಾರೆಂಟಿ ಕಮಿಟಿ ಸದಸ್ಯ ಮಧು ಪಾಲೆಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಸೈಯದ್ ಗೌಸ್ ಅಹಮದ್, ಆಜಾಂ, ಅಶೋಕ್‍ನಾಯ್ಡು, ಸೈಯದ್ ಅಕ್ಬರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now