Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್‌ ನ ಮಹತ್ವದ ‘SIR’ ಸಭೆ: ಪ್ರಮುಖ ನಾಯಕರ ಭಾಗಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್‌. 24 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿಸಿದಂತೆ ಇಂದು ಸಭೆಯನ್ನು ಆಯೋಜಿಸಲಾಗಿದೆ.

ಮಾಜಿ ಸಚಿವರಾದ ಪಿ. ಟಿ. ಪರಮೇಶ್ವರ ನಾಯ್ಕ ರವರು ಚಿತ್ರದುರ್ಗ ಜಿಲ್ಲಾ SIR ವೀಕ್ಷಕರಾಗಿ ನೇಮಕಗೊಂಡಿದ್ದು, ಇವರ ವೀಕ್ಷಣೆಯಲ್ಲಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ. ಸಿ. ವೀರೇಂದ್ರ ಪಪ್ಪಿ ರವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.ಇಂದು ಬೆಳಿಗ್ಗೆ 10:00 ಗಂಟೆಗೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಪಕ್ಕ ಇರುವ ಲಿಡ್ಕರ್ ಭವನದಲ್ಲಿ ಸಭೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಾಜಿ ಸಂಸದರಾದ ಬಿ. ಎನ್. ಚಂದ್ರಪ್ಪ, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿಗಳಾದ ಮುರಳಿಧರ ಹಾಲಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹೆಚ್. ಅನಿಮಲಿ ಷಣ್ಮುಖಪ್ಪ ಮತ್ತು ಡಾ. ಬಿ. ತಿಪ್ಪೇಸ್ವಾಮಿ ಉಪಸ್ಥಿತರಿರಲಿದ್ದಾರೆ. ಅಲ್ಲದೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಕೆ. ತಾಜ್‌ ಪೀರ್, ಕಾರ್ಯಾಧ್ಯಕ್ಷರಾದ ಕೆ. ಎಂ. ಹಾಲಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಆರ್. ಶಿವಣ್ಣ, ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ ಹಾಗೂ ಕೆಪಿಸಿಸಿಯ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದಂತೆ, ಚಿತ್ರದುರ್ಗ ಕ್ಷೇತ್ರ ವ್ಯಾಪ್ತಿಯ ಈ ಕೆಳಗಿನ ಎಲ್ಲಾ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಭೆಗೆ ತಪ್ಪದೇ ಹಾಗೂ ಕಡ್ಡಾಯವಾಗಿ ಹಾಜರಿರಬೇಕೆಂದು ಕೋರಲಾಗಿದೆ.

 

ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, 2023ರ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕೆಪಿಸಿಸಿ ಸದಸ್ಯರುಗಳು. ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು.ಮುಂಚೂಣಿ ಮತ್ತು ವಿವಿಧ ಸೆಲ್‌ಗಳ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರುಗಳು, ಬೂತ್ ಲೆವೆಲ್ ಏಜೆಂಟ್-2 (BLA-2)ಗಳು. ಗ್ಯಾರಂಟಿ ಯೋಜನೆಗಳು, ಕೆ.ಡಿ.ಪಿ (KDP) ಮತ್ತು ಇತರೆ ರಾಜ್ಯ ಹಾಗೂ ಜಿಲ್ಲಾ ನಿಗಮ/ಮಂಡಳಿಗಳ ಪದಾಧಿಕಾರಿಗಳು.ನಗರಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮಪಂಚಾಯಿತಿಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು.ವಾರ್ಡ್ ಮತ್ತು ಬೂತ್ ಸಮಿತಿಗಳ ಅಧ್ಯಕ್ಷರುಗಳು ಸಭೆಗೆ ತಪ್ಪದೇ ಹಾಗೂ ಕಡ್ಡಾಯವಾಗಿ ಹಾಜರಿರಬೇಕೆಂದು ಎಂದು ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now