ಕಲಬುರ್ಗಿ: ಕಾಂಗ್ರೆಸ್ನವರು ಡಿಕ್ಷನರಿಯಲ್ಲಿ ಇಲ್ಲದಿರುವ, ಬೇಡದಿರುವಂತಹ ಪದಗಳನ್ನು ಬಳಸುತ್ತಿದ್ದಾರೆ. ಇದನ್ನು ಮತದಾರರು ಗಮನಿಸುತ್ತಿದ್ದು, ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಜನ ಗಮನಿಸುತ್ತಿದ್ದಾರೆ.
ನೂರು ಕೋಟಿ ವ್ಯಾಕ್ಸಿನೇಷನ್ ಸಾಧನೆಗೆ ಇಡೀ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.
ಪ್ರಧಾನಿ ದೇಶದ ವಿಜ್ಞಾನಿಗಳಿಗೆ, ವೈದ್ಯರಿಗೆ, ಆರೋಗ್ಯ ಸಿಬ್ಬಂದಿಗೆ ಹಾಗು ಡಿ ಗ್ರೂಪ್ ನೌಕರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ನವರು ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ನವರ ವರ್ತನೆಗೆ ಜನರು ಉತ್ತರ ಕೊಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಭಾರತ-ಪಾಕಿಸ್ತಾನ ಟಿ-20 ಕ್ರಿಕೆಟ್ ಪಂದ್ಯ ಹಿನ್ನೆಲೆಯಲ್ಲಿ ಮಾತನಾಡುತ್ತಾ, ನಮ್ಮಲ್ಲೂ ಕೆಲ ರಾಷ್ಟ್ರದ್ರೋಹಿಗಳು ಕ್ರಿಕೆಟ್ನಲ್ಲೂ ಪಾಕಿಸ್ತಾನ ಪರ ಇದ್ದಾರೆ. ಆಟವನ್ನು ಆಟದ ರೀತಿಯಲ್ಲಿಯೇ ನೋಡಬೇಕು. ಆದರೆ, ಆಟದಲ್ಲಿಯೂ ದ್ವೇಷ ಕಾಣುವ ಅವಶ್ಯಕತೆ ಇಲ್ಲ. ಕ್ರೀಡಾಪಟುಗಳ ಶ್ರಮಕ್ಕೆ ನಾನು ಹಾರೈಸುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…