ಕಾಕ್ರೋಚ್ ಜನತಾ ಪಾರ್ಟಿ (Cockroach Janata Party) ದಿಢೀರ್ ಸೃಷ್ಟಿಯಿಂದ ವಿಚಲಿತವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದೇಶದಲ್ಲಿ ಕಾಂಗ್ರೆಸ್ ಈಗಾಗಲೇ ಸಂಪೂರ್ಣ ಕುಸಿದಿದೆ. ಈಗ ಕಾಕ್ರೋಚ್ ತನ್ನನ್ನೆಲ್ಲಿ ಹುದುಗಿಸಿಕೊಳ್ಳುತ್ತದೋ ಎಂಬ ಭಯ ಕಾಂಗ್ರೆಸ್‌ಗೆ ಕಾಡುತ್ತಿದೆ” ಎಂದು ವ್ಯಂಗ್ಯವಾಡಿದರು.
ದೇಶದ ಭದ್ರತೆ, ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ಸುರಕ್ಷತೆಗೆ ಯಾವುದೇ ರೀತಿಯ ಧಕ್ಕೆಯಾದರೂ ಅದನ್ನು ಗಮನಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅದರಂತೆ ಸಂಬಂಧಿತ ಇಲಾಖೆಗಳು ಕ್ರಮ ಕೈಗೊಂಡಿವೆ. ಇದರಲ್ಲಿ ಬಿಜೆಪಿ ವಿಚಲಿತವಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪ್ರತ್ಯೇಕ ಪಾಲಿಕೆಗೆ ಬೆಂಬಲ
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡುವ ಬೇಡಿಕೆಗೆ ತಾವು ಬೆಂಬಲ ವ್ಯಕ್ತಪಡಿಸಿರುವುದಾಗಿ ಪ್ರಹ್ಲಾದ ಜೋಶಿ ತಿಳಿಸಿದರು. 16ನೇ ಹಣಕಾಸು ಆಯೋಗದ ದೃಷ್ಟಿಯಿಂದ ದೊಡ್ಡ ಮಹಾನಗರ ಪಾಲಿಕೆ ಹೆಚ್ಚು ಅನುಕೂಲಕರ ಎಂಬ ಅಭಿಪ್ರಾಯ ಬಿಜೆಪಿಯದ್ದಾಗಿದ್ದರೂ, ಧಾರವಾಡದ ಜನರು ಪ್ರತ್ಯೇಕ ಪಾಲಿಕೆಯನ್ನು ಭಾವನಾತ್ಮಕವಾಗಿ ಬಯಸುತ್ತಿದ್ದಾರೆ ಎಂದು ಹೇಳಿದರು.ಈ ಕುರಿತು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರತ್ಯೇಕ ಪಾಲಿಕೆ ರಚನೆಗೆ ಮನವಿ ಸಲ್ಲಿಸಲಾಗಿದೆ. ವಿಷಯ ಭಾವನಾತ್ಮಕವಾಗಿರುವುದರಿಂದ ಬಾಕಿ ಇರುವ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಅನುಮೋದಿಸಬೇಕೆಂದು ಕೇಳಿದ್ದೇವೆ ಎಂದರು.
ಆದರೆ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿಲ್ಲ. ಈಗ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಅವರು ಟೀಕಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















