ಬಿಜೆಪಿ ಅಂದ್ರೆ ಭ್ರಷ್ಟಾಚಾರದ ಅಕ್ಷಯಪಾತ್ರೆ : ಸರಣಿ ಟ್ವೀಟ್ ಮಾಡುತ್ತಿರುವ ಕಾಂಗ್ರೆಸ್

1 Min Read

 

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಅಭಿಯಾನ ಶುರುವಾಗಿದೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುನಾರ್, ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿ ಕೆ ಹರಿಪ್ರಸಾದ್ ಅವರು, 40% ಕಮಿಷನ್ ಸೇರಿದಂತೆ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ನಾನಾ ಸ್ವರೂಪಗಳ ವಿಡಿಯೋ ಮತ್ತು ಲಂಚದ ರೇಟ್ ಕಾರ್ಡ್‌ಅನ್ನು ಜಂಟಿ ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, 40% ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮೊಂದಿಗೆ ಕೈಜೋಡಿಸಿ. 844-770-40-40 ಗೆ ಕರೆ ಮಾಡಿ ಭ್ರಷ್ಟಾಚಾರದ ಬಗ್ಗೆ ದೂರು ನೀಡಿ. 40percentsarkara.com ಗೆ ಭೇಟಿ ನೀಡಿ ನಿಮ್ಮ ದೂರನ್ನು ದಾಖಲು ಮಾಡಿ. 2023ರಲ್ಲಿ ಕಾಂಗ್ರೆಸ್ ಸರ್ಕಾರ ಈ ದೂರಿನ ಕುರಿತು ಕ್ರಮ ಕೈಗೊಳ್ಳಲಿದೆ.

ರಾಜ್ಯ ಆಳ್ತಿರೋದು – 40% ಸರ್ಕಾರ, ರಾಜ್ಯದ ಜನರ ಕಷ್ಟಕ್ಕೆ ಕಾರಣ- ಭ್ರಷ್ಟಾಚಾರ. ಭ್ರಷ್ಟ ಬಿಜೆಪಿ ಸರ್ಕಾರದ ಅಕ್ರಮಗಳು, ಹಗರಣಗಳು ಎಳೆದಷ್ಟೂ ಹೊರಬರುತ್ತವೆ. ಬಿಜೆಪಿ ಅಂದ್ರೆ ಭ್ರಷ್ಟಾಚಾರದ ಅಕ್ಷಯಪಾತ್ರೆ!.

ಬಿಜೆಪಿ ಎಂದರೆ ಕರಪ್ಷನ್, ಕಮಿಷನ್, ಕಮ್ಯುನಲ್ ಅಜೆಂಡಾ!
ಜನಪರವಾದ ಒಂದು ಕಾರ್ಯಕ್ರಮವನ್ನೂ ಬಿಜೆಪಿ ಸರ್ಕಾರ ಕೊಡಲಿಲ್ಲ. ಬಿಜೆಪಿ ಸರ್ಕಾರದ ಭ್ರಷ್ಟಚಾರಗಳ ವಿರುದ್ಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಸಹಾಯವಾಣಿ ಹಾಗೂ ವೆಬ್ ಸೈಟ್ ಆರಂಭಿಸಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು.

ರಾಜ್ಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷದಿಂದ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂಪೂರ್ಣ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದಜ ಟ್ವೀಟ್ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *