ಮಂಡ್ಯ: ಇಂದು ಪ್ರಧಾನಿ ಮೋದಿ ಜಿಲ್ಲೆಗೆ ಭೇಟಿ ನೀಡಿದ್ದು, ಬೆಂಗಳೂರು – ಮೈಸೂರು ದಶಪಥ ರಸ್ತೆಯನ್ನು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2014ಕ್ಕೂ ಮೊದಲಿದ್ದ ಕಾಂಗ್ರೆಸ್ ಸರ್ಕಾರ ಬಡವರನ್ನು ಲೂಟಿ ಮಾಡಿದೆ. ಕಾಂಗ್ರೆಸ್ ನಾಯಕರು ನರೇಂದ್ರ ಮೋದಿಯವರನ್ನು ಸಮಾಧಿ ಮಾಡುವ ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.
ಬಡವರನ್ನು ಲೂಟಿ ಮಾಡುವ ಸರ್ಕಾರವಿತ್ತು. ಅದನ್ನು ಕಿತ್ತೊಗೆಯಲಾಗಿದೆ. ಅಭಿವೃದ್ಧಿಗಾಗಿ ಮತ್ತೆ ಡಬ್ಬಲ್ ಎಂಜಿನ್ ಸರ್ಕಾರವನ್ನೇ ಗೆಲ್ಲಿಸಿ. ಕಾಂಗ್ರೆಸ್ ನವರು ಸಮಾಧಿ ತೆಗೆಯುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ನಾನು ಬೆಂಗಳೂರು – ಮೈಸೂರು ಹೆದ್ದಾರಿಯ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ ಎಂದಿದ್ದಾರೆ.





GIPHY App Key not set. Please check settings