ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ..!

suddionenews
1 Min Read

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನವಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮತ ಎಣಿಕೆ ಕಾರ್ಯದಲ್ಲಿ ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಮುಂದಿದೆ.

ಸಿಪಿ ಯೋಗೀಶ್ವರ್ : 45,982 ಮತಗಳನ್ನ ಪಡೆದಿದ್ದಾರೆ. ಇಲ್ಲಿ ನಿಖಿಲ್ ಕುಮಾರಸ್ವಾಮಿಗೆ 34,808 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಶಿಗ್ಗಾಂವಿ ಉಪಚುನಾವಣೆಯಲ್ಲಿ 44,557 ಮತಗಳನ್ನ ಯಾಸೀರ್ ಅಹ್ಮದ್ ಪಡೆದಿದ್ದಾರೆ. ಬಳ್ಳಾರಿಯ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ 38,373 ಮತಗಳನ್ನು ಈಗಿನ ಮತ ಎಣಿಕೆಯಲ್ಲಿ ಪಡೆದಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಮೂರನೇ ಬಾರಿಯಾದರೂ ಮಗನನ್ನ ಗೆಲ್ಲಿಸಿಯೇ ಗೆಲ್ಲಿಸುತ್ತೇನೆ ಎಂದು ಪಣ ತೊಟ್ಟಿದ್ದ ಕುಮಾರಸ್ವಾಮಿಗೆ ಈ ಹಿನ್ನಡೆ ದೊಡ್ಡ ಆಘಾತವನ್ನೇ ತಂದಿದೆ. ಐದು ವರ್ಷ ಸಿನಿಮಾ ಮಾತ್ರ ಮಾಡ್ತೀನಿ, ಸ್ಪರ್ಧೆ ಮಾಡಲ್ಲ ಎಂದಿದ್ದ ನಿಖಿಲ್ ಕುಮಾರಸ್ವಾಮಿ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಗೆಲ್ಲಬಹುದೆಂಬ ನಿರೀಕ್ಷೆ ಸಿಕ್ಕ ಮೇಲೆ ಸ್ಪರ್ಧೆ ಮಾಡಿದ್ದರು. ಇದು ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಪ್ರಶ್ನೆಯಾಗಿತ್ತು.

ಇನ್ನು ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಟ್ಟಿದ್ದು ಹಲವರ ಬೇಸರಕ್ಕೆ ಕಾರಣವಾಗಿತ್ತು. ಭರತ್ ಬೊಮ್ಮಾಯಿ ಗೆದ್ದೆ ಗೆಲ್ಲುತ್ತಾರೆಂಬ ನಿರೀಕ್ಷೆ ಇತ್ತು. ಇದೀಗ ಶಿಗ್ಗಾಂವಿಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುಂದಿದ್ದಾರೆ. ಯಾಸೀರ್ ಮುನ್ನಡೆ ಸಾಧಿಸಿದ್ದಾರೆ‌.

ಬಳ್ಳಾರಿಯ ಸಂಡೂರಿನಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸಬೇಕೆಂದು ಜನಾರ್ದನ ರೆಡ್ಡಿ, ಶ್ರೀರಾಮುಲು ಸತತ ಹೋರಾಟ ನಡೆಸಿದ್ದಾರೆ. ಮತ ಎಣಿಕೆಯಲ್ಲಿ ಅನ್ನಪೂರ್ಣ ತುಕರಾಂ ಮುನ್ನಡೆ ಸಾಧಿಸಿದ್ದು, ಅವರೇ ಗೆಲ್ಲುವ ಸಾಧ್ಯತೆಯನ್ನು ತೋರಿಸುತ್ತಿದೆ. ಒಟ್ಟಾರೆ ಮೂರು ಕ್ಷೇತ್ರದಲ್ಲೂ ಸದ್ಯದ ಮಟ್ಟಿಗೆ ಕಾಂಗ್ರೆಸ್ ಅಭ್ಯರ್ಥಿಗಳೇ ಮುನ್ನಡೆ ಸಾಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *