ನವದೆಹಲಿ : ಕಾಂಗ್ರೆಸ್ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳಿಗೆ ಪತ್ರ ಬರೆದು ಕ್ಷಮೆಯಾಚಿಸುವಂತೆ ಕೋರಿದ್ದಾರೆ. ಬಾಯಿ ತಪ್ಪಿನಿಂದಾಗಿ ಈ ಮಾತು ಹೇಳಿದ್ದು, ನನ್ನ ತಪ್ಪನ್ನು ಕ್ಷಮಿಸಿ ಎಂದು ಎಂದು ಪತ್ರದಲ್ಲಿ ಬರೆದಿದ್ದಾರೆ.
ಗುರುವಾರ ಸಂಸತ್ತಿನಲ್ಲಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಹೇಳಿದ್ದರು. ಇದರಿಂದಾಗಿ ಕೋಲಾಹಲಕ್ಕೆ ಕಾರಣವಾಯಿತು. ಅಧೀರ್ ರಂಜನ್ ಅವರು ಬೇಷರತ್ ಕ್ಷಮೆ ಯಾಚಿಸಬೇಕು ಹಾಗೂ ರಾಷ್ಟ್ರಪತಿಯಾಗಿರುವ ಆದಿವಾಸಿ ಹೆಣ್ಣು ಮಗಳನ್ನು ಅವಮಾನಿಸುವ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಆತಂಕ ವ್ಯಕ್ತಪಡಿಸಿದರು.