ನವದೆಹಲಿ: ಸುಮಾರು 34 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಿದೆ. ಅದರಲ್ಲಿ ಪಂಜಾಬ್ ನ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
1988ರಲ್ಲಿ ರಸ್ತೆ ಜಗಳದಲ್ಲಿ ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಸಾವನ್ನಪ್ಪಿದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ಅವರನ್ನು ದೋಷಮುಕ್ತಗೊಳಿಸಿಲಾಗಿತ್ತು. ಒಂದು ಸಾವಿರ ದಂಡ ವಿಧಿಸಿ ಬಿಡಗಡೆ ಮಾಡಲಾಗಿತ್ತು. ಆದರೆ ಬಳಿಕ 2018ರಲ್ಲಿ ಮೃತರ ಕುಟುಂಬಸ್ಥರು ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಕೂಡ ಮರು ಪರಿಶೀಳನಾ ಅರ್ಜಿಯನ್ನು ಕೈಗೆತ್ತಿಕೊಂಡಿತ್ತು. ಸದ್ಯ ಸುಪ್ರೀಂ ಕೋರ್ಟ್ ಆದೇಶದಂತೆ ಶಿಕ್ಷೆಗೆ ಗುರಿ ಮಾಡಲು ಪಂಜಾಬ್ ಪೊಲೀಸರು ಸಿಧುನನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ.
1999 ರಲ್ಲಿ, ಪಟಿಯಾಲದ ಸೆಷನ್ಸ್ ನ್ಯಾಯಾಲಯವು ಸಿಧು ಮತ್ತು ಅವರ ಸಹಚರರನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಖುಲಾಸೆ ಮಾಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ 2006 ರಲ್ಲಿ ಸಿಧುವನ್ನು ತಪ್ಪಿತಸ್ಥ ನರಹತ್ಯೆಯ ಅಪರಾಧಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.
2018 ರಲ್ಲಿ ಸಿಧು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ಒಂದೇ ಏಟಿಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದ ಸುಪ್ರೀಂಕೋರ್ಟ್ ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ ಕಾರಣಕ್ಕೆ ಸಿಧುವನ್ನು ತಪ್ಪಿತಸ್ಥ ಎಂದು ಪರಿಗಣಿಸಿತು. ಸಿಧುಗೆ ಜೈಲು ಶಿಕ್ಷೆ ಮತ್ತು ₹ 1,000 ದಂಡ ವಿಧಿಸಲಾಗಿತ್ತು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…