Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಗೆ ಕಾಂಗ್ರೆಸ್ ವಿರೋಧ

---Advertisement---

ಬೆಂಗಳೂರು: ಲೋಕಸಭಾ ಕ್ಷೇತ್ರಗಳ ವಿಂಗಡಣೆ ಮಾಡಲು ಹೊರಟಿರುವ ಬಿಜೆಪಿಯ ನಿರ್ಧಾರವನ್ನ ಕಾಂಗ್ರೆಸ್ ವಿರೋಧಿಸ್ತಾ ಇದೆ. ಇದು ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾಡ್ತಾ ಇರುವಂತ ಮರುವಿಂಗಡಣೆ ಇದು ಎಂಬ ಮಾತನ್ನ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದರೆ ಇದರಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತೆ ಅಂತಿದ್ದಾರೆ ಕಾಂಗ್ರೆಸ್ ನಾಯಕರು. ಈ ಕಾರಣದಿಂದಾಗಿಯೇ ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ.

ಇದಕ್ಕೆ ಬಿಜೆಪಿ ಕೂಡ ತಿರುಗೇಟು ಕೊಟ್ಟಿದೆ. ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಂದು. ಕರ್ನಾಟಕದ ರಾಜಧಾನಿ ಬೆಂಗಳೂರು. ಇಲ್ಲಿ ಜಿಬಿಎ ರಚನೆ ಮಾಡಿದ್ರಿ, ವಾರ್ಡ್ ಗಳನ್ನ ಮರುವಿಂಗಡಣೆ ಮಾಡುದ್ರಿ, ಬಿಬಿಎಂಪಿ ತೆಗೆದು ಗ್ರೇಟರ್ ಬೆಂಗಳೂರು ಅಥಾರಿಟಿಯನ್ನ ರಚನೆ ಮಾಡಿದ್ದೀರಿ ಕಾಂಗ್ರೆಸ್ ನವರು. 25 ಸಾವಿರ ಮತದಾರರಿಗೆ ಒಂದು ವಾರ್ಡ್ ಅಂತ ಮಾಡಿದ್ದೀರಿ. ಆದರೆ ಲೋಕಸಭಾ ಕ್ಷೇತ್ರವನ್ನು ಹೆಚ್ಚಳ ಮಾಡೋದಕ್ಕೆ ವಿರೋಧ ಮಾಡ್ತಾ ಇದ್ದೀರಿ ಎಂಬ ಪ್ರಶ್ನೆ ಮಾಡಿದೆ.

ಲೋಕಸಭಾ ಸ್ಥಾನಗಳನ್ನ ಹೆಚ್ಚಳ ಮಾಡುವುದಕ್ಕೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡು ಆ ಸಂಬಂಧ ಬಿಲ್ ಅನ್ನು ಸಂಸತ್ ಅಧಿವೇಶನದಲ್ಲಿ ಮಂಡನೆ ಮಾಡಿತ್ತು. ಆದರೆ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಈ ಬಿಲ್ ಮಂಡನೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತೆ ಎಂಬ ವಾದ ಮಂಡಿಸಿದ್ದರು. 1971ರಲ್ಲಿ 580 ಕ್ಕೂ ಹೆಚ್ಚು ಕ್ಷೇತ್ರಗಳು ಇದ್ದವು. 3 ದಶಕಗಳ ಬಳಿಕ ಕ್ಷೇತ್ರಗಳ ಹಡಚ್ಚಳ ಮಾಡಲು ತೀರ್ಮಾನ ಮಾಡಿದೆ. 2026ರ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಬೇಕು ಎಂಬ ನಿರ್ಧಾರ ಮಾಡಲು ಬಿಜೆಪಿ ಹೊರಟಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...