Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಪರ ಯಡಿಯೂರಪ್ಪ ಮತಯಾಚನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.16  : ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಿದರೆ, ನನ್ನನ್ನು ಗೆಲ್ಲಿಸಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತಯಾಚನೆ ವೇಳೆ ತಿಳಿಸಿದ್ದಾರೆ.

 

ಚಿತ್ರದುರ್ಗ ನಗರದಲ್ಲಿ ನಡೆದ ಲಿಂಗಾಯತ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಎಸ್ವೈ, ಮೈತ್ರಿ ಅಭ್ಯರ್ಥಯನ್ನು ಗೆಲ್ಲಿಸಿ ಕೊಟ್ಟರೆ “ಹಂಪಿ ಉತ್ಸವದ ರೀತಿಯಲ್ಲಿ ಮದಕರಿ ನಾಯಕರ ಉತ್ಸವ” ಮಾಡ್ತೀವಿ ಎಂದು ಮಾಜಿ ಸಿಎಂ ಬಿಎಸ್ವೈ ಭರವಸೆ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಕೇಂದ್ರದ 5,300 ಕೋಟಿ ಹಣವನ್ನು ಇವತ್ತಲ್ಲ ನಾಳೆ ಬರುತ್ತದೆ. ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನವೊಲಿಸಿ 5,300 ಕೋಟಿ ತರುತ್ತೇನೆ. ನನಗೆ ಈಗ 82 ವರ್ಷ ಆಗಿದೆ. ನನಗೆ ದೇವರು ಶಕ್ತಿ ಕೊಟ್ರೆ,  ಇನ್ನೊಂದು ಲೋಕಸಭೆ ಚುನಾವಣೆ ಮಾಡ್ತೀನಿ.

ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ನಿಮ್ಮ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಹೇಳಲಿ, ಮೋದಿ ಮುಂದೆ ಕಾಂಗ್ರೆಸ್ ಪ್ರಧಾನಿ ಹೆಸರು ಹೇಳುವ ತಾಕತ್ ಇಲ್ಲ. ಜೊತೆಗೆ ಚುನಾವಣೆಗೂ ಮುನ್ನವೇ ನೀವು ಸೋಲು ಒಪ್ಪಿಕೊಂಡಿದ್ದೀರ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ರೈತರ ಕಿಸಾನ್ ಸಮ್ಮಾನ್ ಯೋಜನೆ ಯಾಕೆ ಬಂದ್ ಮಾಡಿದ್ರಿ ?. ಎಂದು ಪ್ರಶ್ನೆ ಹಾಕಿದರು. ಭಾಗ್ಯಲಕ್ಷ್ಮಿ ಯೋಜನೆ ಯಾಕೆ ನೀವು ಬಂದ್ ಮಾಡಿದ್ರಿ? ಸರ್ಕಾರದಲ್ಲಿ ಹಣ ಇಲ್ಲದೇ ಸರ್ಕಾರ ದಿವಾಳಿ ಆಗಿದೆ. ಈ ಸರ್ಕಾರ ರೈತ ವಿರೋಧಿ ಸರ್ಕಾರ ಅನ್ನೋದು ಖಚಿತಪಡಿಸಿಕೊಂಡಿದ್ದೀರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...