Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಪಕ್ಷ ಎಸ್‍ಐಆರ್ ಬಗ್ಗೆ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ : ಹನುಮಂತೇಗೌಡ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 04 : ಕಾಂಗ್ರೆಸ್ ಪಕ್ಷವು ಎಸ್‍ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಮತ್ತು ಅನಪೇಕ್ಷಿತ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಚುನಾವಣಾ ಆಯೋಗದ ಮೇಲೆ ಜನರು ಇಟ್ಟಿರುವ ನಂಬಿಕೆ-ವಿಶ್ವಾಸಕ್ಕೆ ಧಕ್ಕೆ ತರುವ ಕಾರ್ಯ ನಡೆದಿದೆ ಎಂದು ಬಿಜೆಪಿ ಮುಖಂಡರಾದ ಹನುಮಂತೇಗೌಡ ಕಾಂಗ್ರೆಸ್ ಪಕ್ಷದ ಮೇಲೆ ಕಿಡಿ ಕಾರಿದ್ದಾರೆ.

ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಈ ಹಿಂದೆ 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಕಾರ್ಯ ನಡೆದಿತ್ತು. ಕಳೆದ 24 ವರ್ಷಗಳಿಂದ ಎಸ್‍ಐಆರ್ ನಡೆದಿಲ್ಲ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜೂನ್ 30ರಿಂದ ಇದು ನಡೆಯುತ್ತಿದೆ. ಅನರ್ಹರನ್ನು ಮತಪಟ್ಟಿಯಿಂದ ಕೈಬಿಡುವುದು, ಅರ್ಹರನ್ನು ಉಳಿಸಿಕೊಂಡು ಮತಪಟ್ಟಿ ಶುದ್ಧಗೊಳಿಸುವ ಪ್ರಕ್ರಿಯೆ ಇದಾಗಿದೆ. ಬಿ.ಎಲ್.ಒ ಗಳ ಮೇಲೆ ಅನಗತ್ಯ ಒತ್ತಡ ಹೇರುವುದು ಕಂಡುಬರುತ್ತಿದೆ. ಇದನ್ನು ಒಪ್ಪಿಕೊಳ್ಳಲಾಗದು. ಬಿ.ಎಲ್.ಒ ಗಳ ಮೇಲೆ ಅನಗತ್ಯ ಒತ್ತಡ ಹೇರುವುದು ಮುಂದುವರಿದರೆ ನಾವು ಸುಮ್ಮನಿರುವುದಿಲ್ಲ; ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇವೆ ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಇಲ್ಲಸಲ್ಲದ ವಿಷಯಗಳನ್ನು ಜನರಲ್ಲಿ ಬಿತ್ತಿ, ಬಣ್ಣ ಕಟ್ಟಿ ಹೇಳುವ ಕೆಲಸ ಮಾಡುತ್ತಿದೆ. ಗಡಿ ಭಾಗದಲ್ಲಿ ಹೊರರಾಜ್ಯದವರ, ಭಾರತೀಯ ಪೌರತ್ವ ಹೊಂದಿರದವರನ್ನು ಮತದಾರರನ್ನಾಗಿ ಸೇರಿಸಲಾಗಿದೆ. ರಾಜ್ಯದಲ್ಲಿ ಸುಮಾರು 60ರಿಂದ 65 ಲಕ್ಷ ನಕಲಿ ಮತದಾರರನ್ನು ಕೈಬಿಡಲಾಗುವ ಸಾಧ್ಯತೆ ಇದೆ. ಮೃತಪಟ್ಟವರು, ನಕಲಿಗಳ ಹೆಸರು ಪಟ್ಟಿಯಲ್ಲಿದ್ದು ಅದನ್ನು ದೇಶದ ಭದ್ರತೆಯ ದೃಷ್ಟಿಯಿಂದ ಕೈಬಿಡುವುದು ಅನಿವಾರ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಘನತೆಗೆ ತಕ್ಕಂತೆ ಮಾತನಾಡಲಿ. ಅವರು ಘನತೆ ತೊರೆದು ಮಾತನಾಡುತ್ತಿದ್ದು, ಅದರಲ್ಲಿ ರಾಜಕೀಯ ದುರುದ್ದೇಶ ಅಡಗಿದೆ. ಬಿಎಲ್‍ಒಗಳು 3 ಬಾರಿ ಮನೆಗಳಿಗೆ ಭೇಟಿ ಕೊಟ್ಟು ನಕಲಿ ಮತ್ತು ಮೃತರ ಹೆಸರನ್ನು ಕೈಬಿಡುವ ಕೆಲಸ ಮಾಡಬೇಕಿದೆ. ಆದರೆ, ಕಾಂಗ್ರೆಸ್ ಪಕ್ಷವು ಜನರಿಗೆ ತಪ್ಪು ಮಾಹಿತಿ ಕೊಡುತ್ತಿದೆ. ಇದನ್ನು ಬಿಜೆಪಿ ಮುಖಂಡರಾದ ಹನುಮಂತೇಗೌಡ ಖಂಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now