ಕಾಂಗ್ರೆಸ್ ಪಕ್ಷದ ಗೋಸುಂಬೆ ರಾಜಕೀಯ:ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಗೋಸುಂಬೆ ರಾಜಕೀಯ ಮಾಡುತ್ತಿದ್ದು, ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಲಾಭ ಇದ್ದರೆ ಮಾತ್ರ ದಲಿತರು, ರೈತರ ಬಗ್ಗೆ ಪ್ರೀತಿ ತೋರಿಸುತ್ತದೆ. ತಮ್ಮ ಆಡಳಿತ ಇರುವ ಕಡೆ ಅದು ದೌರ್ಜನ್ಯಗಳ ವಿರುದ್ಧ ಮಾತನ್ನೇ ಆಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ ಎಂದರು.

ದಲಿತರು, ರೈತರ ಬಗ್ಗೆ ನಕಲಿ ಪ್ರೀತಿ ತೋರಿಸುವ ಕಾಂಗ್ರೆಸ್ಸಿಗರು ತಮ್ಮ ಪಕ್ಷ ಆಡಳಿತ ಇರುವ ರಾಜ್ಯದಲ್ಲಿ ಬಾಯಿ ಮುಚ್ಚಿ ಕುಳಿತಿರುತ್ತಾರೆ. ಸುಮಾರು 7 ದಶಕಗಳ ಕಾಲ ದಲಿತರನ್ನು ಮತಬ್ಯಾಂಕ್ ಮಾಡಿಕೊಂಡಿದ್ದ ಕಾಂಗ್ರೆಸ್, ದಲಿತರ ಸಬಲೀಕರಣಕ್ಕೆ ಪ್ರಯತ್ನ ಮಾಡಲೇ ಇಲ್ಲ ಎಂದರು.

ರಾಜಸ್ಥಾನದಲ್ಲಿ ಒಂದು ವರ್ಷದಲ್ಲಿ 80 ಸಾವಿರ ಮಹಿಳೆಯರು ಮತ್ತು ದಲಿತರ ವಿರುದ್ಧ 12 ಸಾವಿರ ಅತ್ಯಾಚಾರದ ಕೇಸ್‍ಗಳು ದಾಖಲಾಗಿವೆ. ಹೀಗಿದ್ದರೂ ಉತ್ತರ ಪ್ರದೇಶದಲ್ಲಿ ಹೋರಾಟ ಮಾಡುವ ಕಾಂಗ್ರೆಸ್ಸಿಗರು ರಾಜಸ್ಥಾನದಲ್ಲಿ ತಮ್ಮ ಪಕ್ಷ ಆಡಳಿತ ಮಾಡುವ ಕಾರಣ ಅಲ್ಲಿಗೆ ತೆರಳಿ ಪ್ರತಿಭಟನೆ ಮಾಡುತ್ತಿಲ್ಲ ಎಂದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬೆಂಬಲಿಸಿದ ಕಾರಣಕ್ಕಾಗಿ ದಲಿತರು, ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ. ಆದರೆ, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷದ ಮುಖಂಡರು ಆಕೆಯ ಕಾರ್ಯಕರ್ತರ ದೌರ್ಜನ್ಯವನ್ನು ಖಂಡಿಸಿಲ್ಲ. ಪಶ್ಚಿಮ ಬಂಗಾಲದಲ್ಲಿ ದಲಿತರಿಗೆ ಆದ ಅನ್ಯಾಯದ ಬಗ್ಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಅವರು ಟ್ವೀಟ್ ಮಾಡಿಲ್ಲ ಎಂದು ಅವರು ವಿವರಿಸಿದರು.

ದೆಹಲಿ ರೈತರ ಹೋರಾಟಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಾತುಕತೆ ನಡೆಸುತ್ತಿದೆ ಉತ್ತರ ಪ್ರದೇಶದಲ್ಲಿ ಆದ ದುರ್ಘಟನೆ ಕುರಿತು ಕ್ರಮ ಕೈಗೊಳ್ಳುವುದಾಗಿ ಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ.ನಡ್ಡಾ ಅವರೇ ಹೇಳಿದ್ದಾರೆ. ಆದರೆ, ರಾಜಸ್ಥಾನ ಮತ್ತಿತರ ಕಡೆಗಳಲ್ಲಿ ಆದ ಅತ್ಯಾಚಾರ, ದಲಿತರ ಮೇಲಿನ ದೌರ್ಜನ್ಯದ ಕುರಿತು ಕಾಂಗ್ರೆಸ್ ಮುಖಂಡರು ಮೌನವಾಗಿಯೇ ಇದ್ದಾರೆ ಎಂದು ತಿಳಿಸಿದರು.

ರಾಜಸ್ಥಾನದ ದುರ್ಘಟನೆಗಳ ಸಂಬಂಧ ಕ್ರಮಕ್ಕೆ ಸೂಚಿಸಿ ಮಾನವ ಹಕ್ಕುಗಳ ಆಯೋಗವು ಸರಕಾರ, ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಕೊಟ್ಟಿದೆ. ಮಹಾರಾಷ್ಟ್ರದಲ್ಲಿ ದಲಿತರ ಮೇಲೆ ದೌರ್ಜನ್ಯ, ಕೊಲೆ ಆದರೆ ಅದರ ಬಗ್ಗೆ ಕಾಂಗ್ರೆಸ್ ಉಸಿರೆತ್ತುವುದಿಲ್ಲ. ರಾಜ್ಯದಲ್ಲೂ ಮುಸ್ಲಿಮರಿಂದ ಅತ್ಯಾಚಾರ ನಡೆದರೆ ಕಾಂಗ್ರೆಸ್ ನಾಯಕರು ಆ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು..

ಬಿಜೆಪಿ ಒಬ್ಬರಿಗೊಂದು ಇನ್ನೊಬ್ಬರಿಗೆ ಮತ್ತೊಂದು ಎಂಬ ಜಾಯಮಾನ ಹೊಂದಿಲ್ಲ. ರಾಜಕೀಯ ಲಾಭ ಇದ್ದರೆ ಮಾತ್ರ ಕಾಂಗ್ರೆಸ್ ಪ್ರತಿಭಟನೆಗೆ ಇಳಿಯುತ್ತದೆ. ದ್ವಂದ್ವ ನೀತಿಯಿಂದಲೇ ಕಾಂಗ್ರೆಸ್ ಪಕ್ಷ ಈ ದುಸ್ಥಿತಿಗೆ ಇಳಿದಿದೆ. ಖಾಯಂ ಅಧ್ಯಕ್ಷರೇ ಇಲ್ಲದ ಪಕ್ಷವದು ಎಂದು ವಿವರಿಸಿದರು. ಕಾಂಗ್ರೆಸ್ಸಿಗರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡಿ ಮುಸ್ಲಿಮರು ಮತ್ತು ದಲಿತರನ್ನು ಭಯಭೀತರನ್ನಾಗಿ ಮಾಡಿದ್ದರು. ಬಿಜೆಪಿಯಿಂದ ದೂರವಿದ್ದ ದಲಿತರು ಈಗ ಬಿಜೆಪಿ ಪರವಾಗಿ ನಿಂತಿದ್ದಾರೆ ಎಂದು ತಿಳಿಸಿದರು.

suddionenews

Recent Posts

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…

1 hour ago

ಚಿತ್ರದುರ್ಗ : ನಾಲ್ವರು ಶ್ರೀಗಂಧದ ಕಳ್ಳರ ಬಂಧನ : 7.78 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ

    ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…

9 hours ago

ಮಹಾರಾಷ್ಟ್ರದ ಸಾರಿಗೆ ಬಸ್ ಮತ್ತು ನಿರ್ವಾಹಕನಿಗೆ ಮಸಿ : ಚಿತ್ರದುರ್ಗದಲ್ಲಿ 8 ಮಂದಿ ಪೊಲೀಸರ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಮಹಾರಾಷ್ಟ್ರದಲ್ಲಿ ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕನಿಗೆ ಮರಾಠಿಗರು ಕನ್ನಡದಲ್ಲಿ ಟಿಕೆಟ್ ಕೇಳಿದ…

11 hours ago

ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರದ ಸಂಕಲ್ಪ : ಸಚಿವ ಡಿ.ಸುಧಾಕರ್

ಚಿತ್ರದುರ್ಗ. ಫೆ.22: ರಾಜ್ಯದ ರೈತರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಯೋಜನಾ ಮತ್ತು…

12 hours ago

ಇ-ಖಾತಾ ಅಭಿಯಾನಕ್ಕೆ ಸಚಿವ ಡಿ.ಸುಧಾಕರ್ ಚಾಲನೆ

ಚಿತ್ರದುರ್ಗ. ಫೆ.22: ಇ-ಖಾತಾ ಅಭಿಯಾನ ಮತ್ತು ಸಹಾಯವಾಣಿ ಕೇಂದ್ರಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

12 hours ago