Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಅಧ್ಯಕ್ಷೀಯ ಚುನಾವಣೆ ಫಲಿತಾಂಶ : ಮತ ಎಣಿಕೆಗೆ ಕಾಂಗ್ರೆಸ್ ಸಜ್ಜು

Facebook
Twitter
Telegram
WhatsApp

 

ಸುದ್ದಿಒನ್ ವೆಬ್ ಡೆಸ್ಕ್

ನವದೆಹಲಿ : ಅಕ್ಟೋಬರ್ 17 ರ ಸೋಮವಾರ ನಡೆದ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಮತ ಎಣಿಕೆಯು ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಅಕ್ಟೋಬರ್ 19 ರ ಬುಧವಾರ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ.

ತೀವ್ರ ಕುತೂಹಲ ಮೂಡಿಸಿರುವ ಈ ಚುನಾವಣೆಯಲ್ಲಿ
ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಹಿರಿಯರ ನೆಚ್ಚಿನ ಆಯ್ಕೆ ಎಂದು ಪರಿಗಣಿಸಿದರೆ, ಶಶಿ ತರೂರ್ ಅವರನ್ನು ಪಕ್ಷದ  ಪರಿವರ್ತನೆಯ ಅಭ್ಯರ್ಥಿ ಎಂದು ಬಿಂಬಿಸಿದ್ದಾರೆ.

ವರದಿಗಳ ಪ್ರಕಾರ, ನಾಳೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ, ದೇಶಾದ್ಯಂತ ಸ್ಥಾಪಿಸಲಾದ 68 ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಮಂಗಳವಾರ ರಾಷ್ಟ್ರ ರಾಜಧಾನಿಗೆ ತರಲಾಗಿದೆ. ಅವುಗಳನ್ನು ಪಕ್ಷದ ಪ್ರಧಾನ ಕಚೇರಿಯ ‘ಸ್ಟ್ರಾಂಗ್ ರೂಂ’ನಲ್ಲಿ ಇರಿಸಲಾಗಿದೆ. ಅಭ್ಯರ್ಥಿಗಳಾದ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಏಜೆಂಟರ ಮುಂದೆ ಮತಪೆಟ್ಟಿಗೆಗಳನ್ನು ತೆರೆಯಲಾಗುವುದು ಎಂದು ವರದಿಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯನ್ನು ‘ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ’ ರೀತಿಯಲ್ಲಿ ನಡೆಸಲಾಗಿದೆ. ಒಟ್ಟು 9,915 ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳಲ್ಲಿ 9,500 ಕ್ಕೂ ಹೆಚ್ಚು ಜನರು ಪಿಸಿಸಿ ಕಚೇರಿಗಳು ಮತ್ತು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಊಹಾಪೋಹಗಳ ನಡುವೆ, ಪಕ್ಷವನ್ನು ನಡೆಸುವಲ್ಲಿ ಗಾಂಧಿ ಕುಟುಂಬದ ಸಲಹೆಯನ್ನು ಪಡೆಯಲು ನನಗೆ ಯಾವುದೇ ಅಭ್ಯಂತರ ಇಲ್ಲ ಎಂದು ಖರ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಶಶಿ ತರೂರ್ ಅವರು ಕೆಲವು ಕಾಂಗ್ರೆಸ್ ಹಿರಿಯರನ್ನು “ನೇತಗಿರಿ ಎಂದು ಲೇವಡಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!