ಬೆಂಗಳೂರು: ಗೋವಾ ವಿಧಾನಸಭಾ ಚುನಾವಣೆ ಸನಿಹದಲ್ಲಿದೆ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಜನರನ್ನ ಸೆಳೆಯಲು ವಿವಿಧ ಯೋಜನೆಗಳನ್ನ ಜನರ ಮುಂದೆ ಇಡುತ್ತಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪಕ್ಷ ಮಹದಾಯಿ ನೀರು ಹರಿಸುವ ಬಗ್ಗೆ ತಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.
ಈ ಪ್ರಣಾಳಿಕೆ ಕರ್ನಾಟಕದಲ್ಲಿ ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಪ್ರಣಾಳಿಕೆ ವಿರುದ್ಧ ಆಕ್ರೋಶಗೊಂಡಿರುವ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಿಂ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿವೆ.
ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಮಹದಾಯಿ ನೀರಿನ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ. ಗೋವಾದ ಜನತೆಗೆ ಮಹದಾಯಿ ನೀರು ನೀಡುವುದಾಗಿ ಘೋಷಿಸಿದೆ. ಈ ವಿಚಾರ ಗೊತ್ತಿದ್ದರು ನಮ್ಮ ರಾಜ್ಯದ ಕಾಂಗ್ರೆಸ್ ನಾತಕರು ತುಟಿಕ್ ಪಿಟಿಕ್ ಎಂದಿಲ್ಲ. ಬದಲಿಗೆ ಹೋಗಿ ಪ್ರಚಾರ ಮಾಡಿ ಬಂದಿದ್ದಾರೆ. ಕಾಂಗ್ರೆಸ್ ಇಬ್ಬಗೆಯ ನೀತಿ ಅನುಸರಿಸುತ್ತಿದೆ. ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಲ್ಲ ಎಂದು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಗೋವಾಗೆ ಮಹದಾಯಿ ನೀರು ಬಿಡ್ತೇವೆ ಎಂದು ಘೋಷಿಸಿದೆ. ಇಲ್ಲಿ ಕರ್ನಾಟಕದಲ್ಲಿ ಡಿಕೆಶಿ, ಸಿದ್ದರಾಮಯ್ಯ ನೀರಿಗಾಗಿ ಹೈಟೆಕ್ ಮೇಕೆದಾಟು ಪಾದಯಾತ್ರೆ ಮಾಡ್ತಾರೆ ಅಂತ ಕನ್ನಡಪರ ಸಂಘಟನೆಯ ರವಿಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.