ನವದೆಹಲಿ: ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಇಡಿ ನೀಡಿರುವ ಸಮನ್ಸ್ ಮತ್ತು ವಿಚಾರಣೆ ಸಂಬಂಧ ಕಾಂಗ್ರೆಸ್ ನಾಯಕರು ನಿನ್ನೆಯೆಲ್ಲಾ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಇಂದು ಕೂಡ ದೆಹಲಿಯಲ್ಲಿ ಪ್ರತಿಭಟನೆ ಮುಂದುವರೆಯಲಿದೆ. ನಿನ್ನೆ ಎಲ್ಲಾ ರಾಜ್ಯದ ಕಾಂಗ್ರೆಸ್ ನಾಯಕರು ಸೇರಿ ಪ್ರತಿಭಟನೆ ನಡೆಸಿದ್ದರು.
ಕೇಂದ್ರದ ಅಗ್ನಿಪಥ್ ಯೋಜನೆಯ ವಿರೋಧವಾವಿಯೂ ಕಾಂಗ್ರೆಸ್ ಧ್ವನಿ ಎತ್ತಿದೆ. ಹೀಗಾಗಿ ರಾಜ್ಯದ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಮಲ್ಲಿಕಾರ್ಜುನ ಖರ್ಗೆ , ಪ್ರಿಯಾಂಕಾ ಖರ್ಗೆ ಸೇರಿದಂತೆ ಹಕವರು ದೆಹಲಿಯಲ್ಲಿಯೇ ಇದ್ದಾರೆ.
ಇನ್ನು ಇಂದು ರಾಜ್ಯಕ್ಕೆ ಆಗಮಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ರಾತ್ರಿ ಮತ್ತೆ ದೆಹಲಿಗೆ ತೆರಳಲಿದ್ದಾರೆ. ಮತ್ತೆ ಪ್ರತಿಭಟನೆ ಮಾಡುವುದು ಹಾಗೆ ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯದಲ್ಲಿ ಹೋರಾಟ ರೂಪುರೇಷೆ ಸಿದ್ದಪಡಿಸುವುದು. ಇದೇ ವಿಚಾರಗಳನ್ನು ಇಟ್ಟುಕೊಂಡು ರಾಜ್ಯದಲ್ಲಿ ಬೃಹತ್ ಹೋರಾಟ ನಡೆಸಲು ತಯಾರಿ ಮಾಡಿಕೊಳ್ಳ ಬಗ್ಗೆ ಚರ್ಚೆ ನಡೆಸಲಿದ್ದಾರೆ