ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಚರಂಡಿಗೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತ..!

suddionenews
1 Min Read

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆ ರಾಜ್ಯ ಸರ್ಕಾರದ ಭ್ರಷ್ಟಚಾರದ ವಿರುದ್ಧ ಕಾಂಗ್ರೆಸ್ ಯುವ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಈ ವೇಳೆ ಅಧಿವೇಶನಕ್ಕೆ ಮುತ್ತಿಗೆ ಹಾಕುವ ಯತ್ನ ನಡೆದಿದೆ.

ಪ್ರತಿಭಟನೆಯ ರ್ಯಾಲಿ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನೂಕು ನುಗ್ಗಲು ಸಂಭವಿಸಿದೆ. ಈ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಕರ್ತರನ್ನು ಸೆರೆ ಹಿಡಿಯಲು ಪೊಲೀಸರು ಯತ್ನಿಸಿದ್ದಾರೆ.

ಆದ್ರೆ ಈ ನೂಕು ನಿಗ್ಗಲಿನ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋದ ಕಾರ್ಯಕರ್ತನೊಬ್ಬ ಅಲ್ಲಿಯೇ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದಿದ್ದಾನೆ. ಬಳಿಕ ಪೊಲೀಸರೇ ಕಷ್ಟಪಟ್ಟು ಆತನನ್ನು ಮೇಲಕ್ಕೆ ಎತ್ತಿದ್ದಾರೆ. ಚರಂಡಿಗೆ ಬಿದ್ದವನಿಗೆ ಸದ್ಯ ಏನು ಆಗಿಲ್ಲ.

Share This Article
Leave a Comment

Leave a Reply

Your email address will not be published. Required fields are marked *