Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಕಾಂಗ್ರೆಸ್ ಹೇಳಿಕೆಯೇ ಕಾರಣ : ರೇಣುಕಾಚಾರ್ಯ

Facebook
Twitter
Telegram
WhatsApp

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯಾಗಿದೆ. ಈ ಸಂಬಂಧ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಬೆಳಗ್ಗೆ ಈಶ್ವರಪ್ಪ ಅವರು ಡಿಕೆಶಿ ಮೇಲೆ ಆರೋಪಿಸಿದ್ದರು. ಇದೀಗ ದಾವಣಗೆರೆಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೂಡ ಇದೊಇಗ ಕಾಂಗ್ರೆಸ್ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಅಪ್ಪಟ ದೇಶಪ್ರೇಮಿ 21-22 ವರ್ಷದ ಯುವಕನ ಬರ್ಬರ ಹತ್ಯೆಯಾಗಿದೆ. ಈ ಘಟನೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ಆತನ ಹತ್ಯೆ ಬಗ್ಗೆ ಮಾಹಿತಿ ಇದೆ. ಆತನ ಹತ್ಯೆಗೆ ಕಾರಣ ಕಾಂಗ್ರೆಸ್ ನೀಡಿದ ಹೇಳಿಕೆಯೇ ಆಗಿದೆ. ಈ ಹತ್ಯೆಯ ಹಿಂದೆ ಅಂತರಾಷ್ಟ್ರೀಯ ಸಂಘಟನೆಗಳ ಕೈವಾಡವಿದೆ ಎಂದಿದ್ದಾರೆ.

ಪ್ರಕರಣ ತನಿಖೆ ಹಂತದಲ್ಲಿದೆ. ನಮ್ಮ ಸರ್ಕಾರ ಸಿಎಂ ಬಸವರಾಜ್ ಬೊಮ್ಮಾಯಿ‌, ಗೃಹ ಸಚಿವರು ತನಿಖೆ ನಡೆಸಿ ಈ ಹತ್ಯೆಗೆ ಕಾರಣ ಯಾರು ಎಂಬುದನ್ನ ತಿಳಿದು ಶಿಕ್ಷೆ ನೀಡಬೇಕೆಂದು ಮನವಿ ಮಾಡ್ತೇನೆ. ಕಾಂಗ್ರೆಸ್ ಮುಖಂಡರಿಗೆ ನೈತಿಕ ಹಕ್ಕಿಲ್ಲ. ಈ ಘಟನೆಗೆ ಕಾಂಗ್ರೆಸ್ ಮುಖಂಡರ ಹೇಳಿಕೆಯೇ ಕಾರಣ.ಮುಗ್ದ ವಿದ್ಯಾರ್ಥಿಗಳ ವಿಚಾರದಲ್ಲೂ ಹಿಜಾಬ್ ಎಳೆದು ತಂದಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!