ಬಳ್ಳಾರಿ: ಇಂದು ಕಾಂಗ್ರೆಸ್ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ವೇದಿಕೆ ಮೇಲೆ ವೀರಾವೇಶದ ಭಾಷಣ ಮಾಡಿ ಶ್ರೀರಾಮುಲುಗೆ ಟಾಂಗ್ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಬೆಳಗ್ಗೆಯೇ ಹರಿಹಾಯ್ದಿದ್ದರು. ಕಾಂಗ್ರೆಸ್ ಬಳ್ಳಾರಿಗೆ ಏನು ಮಾಡಿಲ್ಲ ಎಂದಿದ್ದರು. ಈ ವಿಚಾರಕ್ಕೆ ಇತಿಹಾಸ ತಿಳಿಸಿದ್ದಾರೆ.
ವಿಜಯನಗರದ ಉಕ್ಕಿನ ಕಾರ್ಖಾನೆ ಪ್ರಾರಂಭ ಮಾಡಿದ್ದು ಯಾರಪ್ಪ ಶ್ರೀರಾಮುಲು.. ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ ಮಾಡಿದ್ದು ಯಾರಪ್ಪ ರಾಮುಲು..? 8 ವರ್ಷದಲ್ಲಿ ನಿಂದೇನಪ್ಪ ಬಳ್ಳಾರಿಗೆ ಕೊಡುಗೆ? ಎಂದು ಕೇಳಿದ್ದಾರೆ. ಎಂಟು ವರ್ಷದಲ್ಲಿ ಬಳ್ಳಾರಿ ಒಂದೇ ಒಂದು ರೂಪಾಯಿ ಅಭಿವೃದ್ಧಿ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮೊದಲಿಗೆ ರಾಮುಲು ಹೇಳಿದ ಮಾತಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಶ್ರೀರಾಮುಲು ಅಂತ ಒಬ್ಬ ಮಂತ್ರಿ ಇದ್ದಾನೆ. ಕಾಂಗ್ರೆಸ್ ಪಕ್ಷ ಏನು ಮಾಡಿಲ್ಲ ಅಂತ ಹೇಳುತ್ತಾನೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಈ ದೇಶಕ್ಕೆ ಏನು ಮಾಡಿಲ್ಲ ಅಂತ ಹೇಳೊ ರಾಮುಲು ನಿನಗೆ ದೇಶದ ಇತಿಹಾಸದ ಬಗ್ಗೆ ಅರಿವಿಲ್ಲ. ನೆಹರೂ ಹಾಗೂ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…