ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಕಾಂಗ್ರೆಸ್ ಪಕ್ಷ ಎರಡನೇ ಪಟ್ಟಿ ಕೂಡ ರಿಲೀಸ್ ಆಗಿದೆ. ಆದರೆ ಎರಡನೇ ಪಟ್ಟಿಯಲ್ಲಿ ವಲಸಿಗರಿಗೇನೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿರುವ ಆರೋಪ ಕೇಳಿ ಬಂದಿದೆ.
ಕಲಘಟಗಿಯಲ್ಲಿ ಸಂತೋಷ್ ಲಾಡ್ ಗೆ ಟಿಕೆಟ್ ಘೋಷಣೆಯಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿ ಅಸಮಾಧಾನಗೊಂಡಿದ್ದಾರೆ. ಕಡೂರು ಕ್ಚೇತ್ರದಲ್ಲಿ ಕೆಎಸ್ ಆನಂದ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ವೈಎಸ್ ವಿ ದತ್ತಾ ಬೇಸರಗೊಂಡಿದ್ದಾರೆ.
ಇನ್ನೂ ಚಿತ್ರದುರ್ಗದಲ್ಲಿ ರಘು ಆಚಾರ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ವೀರೇಂದ್ರ ಪಪ್ಪಿಗೆ ಟಿಕೆಟ್ ಸಿಕ್ಕಿದೆ.
ಮೊಳಕಾಲ್ಮೂರಿನಲ್ಲಿ ಯೋಗೀಶ್ ಬಾಬು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಎನ್ ವೈ ಗೋಪಾಲಕೃಷ್ಣನಿಗೆ ಟಿಕೆಟ್ ಸಿಕ್ಕಿದೆ.
ಹೊಳಲ್ಕೆರೆ ಕ್ಷೇತ್ರದಲ್ಲಿ ಸವಿತಾ ರಘು ಟಿಕೆಟ್ ಗಾಗಿ ಕಾಯುತ್ತಿದ್ದರು. ಆದರೆ ಮಾಜಿ ಸಚಿವ ಹೆಚ್ ಆಂಜನೇಯ ಅವರಿಗೆ ಟಿಕೆಟ್ ಸಿಕ್ಕಿದೆ.