Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಮ ಮಂದಿರ ನಿರ್ಮಾಣ ಆಗಿದ್ದಕ್ಕೆ ಕಾಂಗ್ರೆಸ್ ಗೆ ಹೊಟ್ಟೆ ಕಿಚ್ಚು : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

---Advertisement---

 

ವಿಜಯಪುರ: ರಾಮ ಮಂದಿರ ನಿರ್ಮಾಣ ಆಗಿದ್ದಕ್ಕೆ ಕಾಂಗ್ರೆಸ್ ನವರು ಹೊಟ್ಟೆ ಕಿಚ್ಚಿನಿಂದ ವರ್ತಿಸುತ್ತಾ ಇದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ರಾಮ ಅನ್ನುವುದು ಒಂದು ಕಾಲ್ಪನಿಕ ಅಂತ ಹೇಳಿದ್ದರು. ಪ್ರಧಾನ ಮಂತ್ರಿಗಳು ಯಾಕೆ ಉದ್ಘಾಟನೆಗೆ ಹೋಗುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು. ಇದ್ಯಾವುದು ಜನ ಸ್ವೀಕಾರ ಮಾಡಿಲ್ಲ ಎಂದಾಗ, ಈಗ 31 ವರ್ಷದ ಹಳೆ ಕೇಸನ್ನು ತೆಗೆದು ಜನರನ್ನು ಅರೆಸ್ಟ್ ಮಾಡುವಂತಹ ಅತ್ಯಂತ ನೀಚ ಕೃತ್ಯಕ್ಕೆ ಕಾಂಗ್ರೆಸ್ ಪಾರ್ಟಿ ಕೈ ಹಾಕಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಒಬ್ಬರು ಪೂಜಾರಿ ಅಂತ ಇದಾರೆ. ಇನ್ನೊಬ್ಬರು ಕುಲಕರ್ಣಿ ಎಂಬುವವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಅವರಿಗೆ 72 ವರ್ಷ. ನಾನು ಅಲ್ಲಿನ ಇನ್ಸ್‌ಪೆಕ್ಟರ್ ಹಾಗೂ ಗ್ರಾಮಾಂತರ ಪೊಲೀಸರು, ಸರ್ಕಾರದ ಆದೇಶವನ್ನು ನೋಡಿಕೊಂಡು, ಅಲ್ಲಿನ ಇನ್ಸ್‌ಪೆಕ್ಟರ್ ಅಂತು ಅತ್ಯಂತ ದ್ವೇಷ ಭಾವನೆಯಿಂದ ವರ್ತಿಸಿದ್ದಾರೆ. ಹೀಗಾಗಿ ರಾಮಮಂದಿರ ಆಗಿದ್ದಕ್ಕೆ ಕಾಂಗ್ರೆಸ್ ಅತ್ಯಂತ ಹೊಟ್ಟೆ ಕಿಚ್ಚಿನಿಂದ ವರ್ತಿಸುತ್ತಾ ಇದೆ. ಇದು ಸರಿಯಲ್ಲ. ಕಾನೂನು ಹೋರಾಟವಂತು ಮಾಡಿಯೇ ಮಾಡುತ್ತೀವಿ. ಸಾಮಾಜಿಕವಾಗಿಯೂ ಹೋರಾಡುತ್ತೀವಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment