Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

---Advertisement---

ಬೆಂಗಳೂರು ನ. 14: ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುವೆ ಎಂದು ತಿಳಿಸಿದರು.

ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ದ ತೀರ್ಮಾನಗಳು ಇನ್ನೂ ಆಗಬೇಕಿದೆ ಎಂದರು.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಹೆಚ್ಚು ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ವಿವರಿಸಿದರು.

ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ ಎಂದು ಟೀಕಿಸಿದರು.

ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಜನರಿಗೆ ತಿಳಿಸಲಿದೆ.

ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದರು.

ಮುಧೋಳ ಬೆಂಕಿ ಪ್ರಕರಣದ ಸತ್ಯ ಹೊರಗೆಳೆಯಲಾಗುವುದು:

ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಅಲ್ಲಗಳೆದಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...