ವಿಧಾನಸೌಧದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದರ್ಪ ತೋರಿಸುತ್ತಿದೆ. ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡಿದ್ದಾರೆ. ವಿಪಕ್ಷ ನಾಯಕರನ್ನು ಸ್ವಾಗತಿಸಲು ಹಿರಿಯ ಅಧಿಕಾರಿಗಳ ಬಳಕೆ ಮಾಡಿಕೊಳ್ಳುತ್ತಿದೆ. ಪ್ರಶ್ನೆ ಮಾಡಿದರೆ ಬಿಜೆಪಿ ಜೆಡಿಎಸ್ ಮೇಲೆ ಅಧಿಕಾರದ ದಬ್ಬಾಳಿಕೆ ನಡೆಸುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ದರ್ಪ ದಬ್ಬಾಳಿಕೆ ನಡೆಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಮ್ಮದು ತಪ್ಪಾಗಿದೆ ಇನ್ಮುಂದೆ ಮಾಡಲ್ಲ ಅಂದಿದ್ದರೆ ಆಗಿತ್ತು. ಆದರೆ ಆಡಳಿತ ರೂಢ ಕಾಂಗ್ರೆಸ್ ನವರಿಗೆ ಇದು ಪ್ರತಿಷ್ಠೆಯಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಬೇರೆ ರಾಜ್ಯಗಳ ಸಿಎಂಗಳ ಸ್ವಾಗತಕ್ಕೆ ಅಧಿಕಾರಿಗಳನ್ನು ನಾನು ನೇಮಿಸಿರಲಿಲ್ಲ. ಜೆಡಿಎಸ್ ನಾಯಕರಿಂದ ಅಲಿ ಸ್ವಾಗತಕ್ಕೆ ನೇಮಿಸಲಿಲ್ಲ. ಅಧಿಕಾರಿಗಳನ್ನು ನಾನು ನೇಮಕ ಮಾಡಿರಲಿಲ್ಲ. ಆದರೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ತಮಗೆ ವಿಶೇಷ ಕ್ಯಾಬಿನ್, ಅಧಿಕಾರಿ ಬೇಕು ಎಂದಿದ್ದರು. ಸರ್ಕಾರದಲ್ಲಿ ವಿಶೇಷ ಸ್ಥಾನ ಪಡೆದಿದ್ದರು ಎಂದಿದ್ದಾರೆ.
ಬಿಜೆಪಿ ಜೆಡಿಎಸ್ ಒಟ್ಟಿಗೆ ಸೇರಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ. ಭೋಜನ ವಿರಾಮಕ್ಕೆ ಬಿಡದೆ ಡೆಪ್ಯುಟಿ ಸ್ಪೀಕರ್ ಕಲಾಪ ನಡೆಸಿದರು. ಸಿಎಂ ಸೂಚನೆ ಮೇರೆಗೆ ಡೆಪ್ಯುಟಿ ಸ್ಪೀಕರ್ ಕಲಾಪ ಮುಂದುವರೆಸಿದ್ರು. ಹಸಿವಿನಿಂದ ಆಕ್ರೋಶಗೊಂಡು ಕೆಲವರು ಕಾಗದ ಪತ್ರ ಹರಿದಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಮೇಲೆ ಯಾವುದೇ ಸಮುದಾಯಕ್ಕೆ ಸೇರಲ್ಲ. ಸ್ಪೀಕರ್ ಪೀಠದಲ್ಲಿ ಕುಳಿತವರು 224 ಶಾಸಕರಿಗೆ ಒಂದೇ. ದಲಿತ ಶಾಸಕರಿಗೆ ಅವಮಾನ ಮಾಡಿದ್ದಾರೆಂದು ಅನುಕಂಪ ಗಿಟ್ಟಿಸಲು ಯತ್ನ. ಇಂಥ ರಾಜಕೀಯ ಹೆಚ್ಚು ದಿನ ನಡೆಯಲ್ಲ ಎಂದಿದ್ದಾರೆ.