ಬೆಂಗಳೂರು: ಇಂದು ಪ್ರೇಮಿಗಳ ದಿನ. ಪ್ರೀತಿಸುವವರು ತಮ್ಮ ಪ್ರೇಮಿಗಳ ಜೊತೆ ಸಮಯ ಕಳೆಯಲು ಇಷ್ಟಪಡುತ್ತಾರೆ. ಹೊಸದಾಗಿ ಪ್ರೀತಿ ಹುಟ್ಟಿರಯವವರು ಪ್ರೇಮ ನಿವೇದನೆ ಮಾಡಿಕೊಳ್ಳುವುದಕ್ಕೆ ಹಾತೊರೆಯುತ್ತಾರೆ. ಇದೀಗ ಕಾಂಗ್ರೆಸ್ ಕೂಡ ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡುತ್ತಿದೆ. ಅದುವೆ ಬಿಜೆಪಿ ನಾಯಕರ ವಿರುದ್ಧ ಹರಿಹಾಯುವ ಮೂಲಕ.
ಕಾಂಗ್ರೆಸ್, ಬಿಜೆಪಿ ನಾಯಕರ ಪೋಸ್ಟರ್ ಸಿದ್ಧ ಮಾಡಿಸಿದ್ದು, ಸಿಎಂ ಬೊಮ್ಮಾಯಿ, ಸಚಿವ ಆರ್ ಅಶೋಕ್, ತೇಜಸ್ವಿ ಸೂರ್ಯ ಫೋಟೋ ಹಾಕಿ ಪ್ರೇಮಿಗಳ ದಿನದ ಪೋಸ್ಟರ್ ಸಿದ್ದತೆ ಮಾಡಿಸಿದ್ದು, ಬಿಜೆಪಿಗರು ಶುದ್ಧ 40% ಪ್ರೇಮಿಗಳು,
40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!.
ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ…..!!. ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ!
ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವನಗಳು!
ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು,
◆ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು.
◆ಸಿಎಂ ಮನೆಗೆ ಕಲ್ಲು ಹೊಡೆಯುವುದು.
◆ರೈತರಿಗೆ ಅವಮಾನಿಸುವುದು.
ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ!. ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ! ಎಂದು ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…