Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಿಎಂ ಆಗಿದ್ದಕ್ಕೆ 115 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತರು!

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌.12 :ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿರುವುದಕ್ಕೆ ಹಾಗೂ ಬಿ.ಕೆ.ಹರಿಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವುದಕ್ಕೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶುಕ್ರವಾರ 115 ತೆಂಗಿನ ಕಾಯಿಗಳನ್ನು ಹೊಡೆದು ಹರಕೆ ತೀರಿಸಲಾಯಿತು.

 

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ, ಬಿ.ಕೆ.ಹರಿಪ್ರಸಾದ್ ಮಂತ್ರಿಯಾಗಲಿ ಇಲ್ಲವೇ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಲಿ ಎಂದು ಕಣಿವೆಮಾರಮ್ಮನಲ್ಲಿ ಹರಕೆ ಮಾಡಿಕೊಳ್ಳಲಾಗಿತ್ತು. ಅದರಂತೆ ತೆಂಗಿನಕಾಯಿಗಳನ್ನು ಹೊಡೆದು ಭಕ್ತಿ ಸಮರ್ಪಿಸಲಾಯಿತೆಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಡಾ.ಬಿ.ತಿಪ್ಪೇಸ್ವಾಮಿ ಜೆಜೆಹಟ್ಟಿ, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾನಂದಿನಿಗೌಡ, ಪ್ರಧಾನ ಕಾರ್ಯದರ್ಶಿ ಅರ್ಪಿತ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಶಬ್ಬೀರ್‍ಭಾಷಾ, ಸೈಯದ್ ವಲಿಖಾದ್ರಿ, ಜಿ.ವಿ.ಮಧುಗೌಡ, ಮುದಸಿರ್ ನವಾಜ್, ದಲಿತ ಮುಖಂಡ
ಬಿ.ರಾಜಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಠ ಪಂಗಡಗಳ ವಿಭಾಗದ ಅಧ್ಯಕ್ಷ ಮಂಜುನಾಥ್, ಹೆಚ್.ಅಂಜಿನಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now