Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾ: ಬಾಬಾ ಸಾಹೇಬ ಅಂಬೇಡ್ಕರ್ ಅವರ ಹೆಸರೇಳುವ ನೈತಿಕತೆ ಕಾಂಗ್ರೆಸ್ಸಿಗರಿಗಿಲ್ಲ : ಸಂಸದ ಗೋವಿಂದ ಕಾರಜೋಳ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ಮೊನ್ನೆ ರಾಜ್ಯಸಭೆಯಲ್ಲಿ ಗೃಹ ಸಚಿವರಾದ ಅಮಿತ್‍ಷಾ ರವರು ಮಾತನಾಡುವ ಸಂಧರ್ಭದಲ್ಲಿ ಕಾಂಗ್ರೆಸ್ಸಿಗರು ಕೇವಲ ಅಂಬೇಡ್ಕರ್‍ರವರ ಹೆಸರನ್ನು ಜಪ ಮಾಡುತ್ತಿದ್ದೀರಿಯೇ ವಿನ: ಅವರನ್ನು ಗೌರವಿಸುವ ಕೆಲಸವನ್ನು ಮಾಡಲಿಲ್ಲ, ಅವರ ಜೀವಿತಾವಧಿಯಲ್ಲಿ ಅವರನ್ನು ಅವಮಾನಿಸಿ ಈಗ ಅವರ ಹೆಸರನ್ನು ಜಪ ಮಾಡುತ್ತಿದ್ದೀರಿ, ಆದರೆ ನಾವು ಬಿಜೆಪಿಗರು ಬಾಬಾ ಸಾಹೆಬ್ ಅಂಬೇಡ್ಕರ್ ಅವರನ್ನು ದೇವರ ಸ್ಥಾನದಲ್ಲಿ ನೋಡುತ್ತಿದ್ದೇವೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದನ್ನು ಕಾಂಗ್ರೆಸ್ಸಿಗರು ಅವರ ಹೇಳಿಕೆಯನ್ನು ತಿರುಚಿ ಮಾತನಾಡುವ ಮೂಲಕ ದೇಶದ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸದಲ್ಲಿ ನಿರತರಾಗಿದ್ದಾರೆ ಇದು ಅತ್ಯಂತ ಖಂಡನೀಯವಾದದ್ದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಪಂಡಿತ್ ಜವಾಹರ್ ಲಾಲ್ ನೆಹರುರವರ ನೃತೃತ್ವದ ಕಾಂಗ್ರೆಸ್ ಡಾ:ಬಾಬಾ ಸಾಹೇಬ್ ಅಂಬೇಡ್ಕರ್‍ರವರನ್ನು ಯಾವ ರೀತಿ ನಡೆಸಿಕೊಂಡರು ಎನ್ನುವುದು ಇಡೀ ದೇಶಕ್ಕೆ ಅಲ್ಲ ಇಡೀ ಜಗತ್ತಿಗೆ ಗೊತ್ತಿದೆ, ಅಂಬೇಡ್ಕರ್‍ರವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯ ಸಂಸ್ಕಾರ ಮಾಡಲು ಆರಡಿ ಮೂರಡಿ ಜಾಗ ನೀಡದ ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ಯೋಗ್ಯತೆ ಇಲ್ಲ. ಅವರು ಅರ್ಥಶಾಸ್ತ್ರಜ್ಞರಾಗಿದ್ದರೂ ಕೂಡ ಅವರಿಗೆ ಆರ್ಥಿಕ ಇಲಾಖೆಯನ್ನು ನೀಡದೇ ಕೇವಲ ಕಾನೂನು ಇಲಾಖೆಯನ್ನು ನೀಡಿ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್‍ರವರು ನೆಹರುರವರ ಮಂತ್ರಿ ಮಂಡಲದಲ್ಲಿ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಗೆ ಬಂದ ನಂತರ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಉದ್ದೇಶಪೂರ್ವಕವಾಗಿ ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಇಷ್ಟೇ ಅಲ್ಲ ಅಂಬೇಡ್ಕರ್ ಜೀವಿತಾವಧಿಯಲ್ಲಿ ಅವರಿಗೆ ಭಾರತ ರತ್ನ ನೀಡಿ ಪುರಸ್ಕರಿಸದೇ ಕೇವಲ ಗಾಂಧಿ ಕುಟುಂಬಕ್ಕೆ ಭಾರತ ರತ್ನ ಪ್ರಶಸ್ತಿ ಕೊಟ್ಟುಕೊಳ್ಳುಲಾಯಿತು.

 

ಇಷ್ಟಕ್ಕೂ ಅಂಬೇಡ್ಕರ್‍ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದು ಬಿ.ಜೆ.ಪಿ. ಬೆಂಬಲಿತ ವಿ.ಪಿ.ಸಿಂಗ್ ನೇತೃತ್ವದ ಸರ್ಕಾರವೇ ಹೊರತು ಕಾಂಗ್ರೆಸ್ ಅಲ್ಲ. ಇನ್ನೂ ಮುಂದುವರೆದು ಮೋದಿಜಿ ನೇತೃತ್ವದ ಎನ್.ಡಿ.ಎ. ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಂಬೇಡ್ಕರ್‍ರವರಿಗೆ ಸಂಬಂಧಿಸಿ ಐದು ಸ್ಥಳಗಳನ್ನು ಪಂಚತೀರ್ಥಗಳೆಂದು ಘೋಷಿಸಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಮೂಲಕ ಪ್ರವಾಸಿ ತಾಣಗಳನ್ನಾಗಿ ಮಾಡಲಾಗಿದೆ. ಅಂಬೇಡ್ಕರ್‍ರವರ 125 ನೇ ಜನ್ಮದಿನಾಚರಣೆಯ ಸ್ಮರಣೆಗಾಗಿ ಡಿಜಿಟಲ್ ಭಿಮ್ ಆಪ್ ನ್ನು ದೇಶಕ್ಕೆ ಸಮರ್ಪಿಸಲಾಗಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...