ದಾವಣಗೆರೆ, ಮೇ.19 : ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದ್ದು, 4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.














