ಚಿತ್ರದುರ್ಗ,(ಮೇ.26) : ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು “ಗ್ರಾಹಕ ಸಂರಕ್ಷಣಾ ಕಾಯ್ದೆ 2019” ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 080-22370477, 22370488, 223704499 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚೆ
ಮೂಲಕ ಇದೇ ಮೇ. 31 ರ ಒಳಗಾಗಿ ಕಳುಹಿಸಿಕೊಡಬಹುದಾಗಿರುತ್ತದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.