ಸುದ್ದಿಒನ್, ಚಿತ್ರದುರ್ಗ,(ಆ. 04): ನಗರದ ಹೊರವಲಯದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ ನಾಲ್ಕಕ್ಕೆ ಏರಿಕೆಯಾಗಿದೆ.
ಕವಾಡಿಗರಹಟ್ಟಿಯ ರುದ್ರಪ್ಪ (50) ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಇವರನ್ನು ಆಗಸ್ಟ್ 02 ರಂದು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುಳಾ, ರಘು ಪ್ರವೀಣ್ ಎಂಬುವರು ಈ ಮೊದಲು ಸಾವನ್ನಪ್ಪಿದ್ದು, ಇಂದು ರುದ್ರಪ್ಪ ನಿಧನರಾಗಿ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಮೃತಪಟ್ಟಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














