ರಾಯಚೂರು: ಕಳೆದ ಕೆಲವು ದಿನಗಳ ಹಿಂದೆ ರಾಯಚೂರಿನಲ್ಲಿ ನಗರಸಭೆ ಸಪ್ಲೈ ಮಾಡಿದ ಕುಡಿಯುವ ನೀರು ಕುಡಿದು ಸಾಕಷ್ಟು ಮಂದಿ ಅಸ್ವಸ್ಥರಾಗಿದ್ದರು. ಕಲುಷಿತ ನೀರು ಕುಡಿದು, ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇಂದು ಮೂರನೇ ಬಲಿಯಾಗಿದೆ.
ಕಲುಷಿತ ನೀರು ಕುಡಿದು ಅಸ್ವಸ್ಥರಾದ ಪರಿಣಾಮ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಈಗಾಗಲೇ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರು ನೀರು ಸೇವಿಸಿದ್ದ, ನೂರ್ ಅರಬ್ ಮೊಹಲ್ಲಾ ರಿಮ್ಸ್ ಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ನಗರಸಭೆ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ನಾಗರಿಕ ವೇದಿಕೆಯಿಂದ ಬಂದ್ ಗೆ ಕರೆ ನೀಡಿದೆ. ಮೂರು ಸಾವುಗಳಾದರೂ ನಗರಸಭೆ ವಿರುದ್ಧ ಕ್ರಮ ತೆಗೆದುಕೊಳ್ಳದ ಸರ್ಕಾರಕ್ಕೆ ಹಿಡಿ ಶಾಪ ಹಾಕಿದ್ದಾರೆ. ಇಷ್ಟೆಲ್ಲ ಘಟನೆ ಸಂಭವಿಸಿದ ಬಳಿಕ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಎಲ್ಲಾ ವಾರ್ಡ್ ನೀರು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.