Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮುಂದುವರೆದ ನರ್ಸಿಂಗ್ ವಿದ್ಯಾರ್ಥಿಗಳ‌ ಪ್ರತಿಭಟನೆ : ಜಿಲ್ಲಾಧಿಕಾರಿಗೆ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆ.01 : ಬಿಎಸ್ಸಿ. ನರ್ಸಿಂಗ್ ಕಾಲೇಜಿಗೆ ಪ್ರತ್ಯೇಕ ಕಾಲೇಜು ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಿನ್ನೆ (ಗುರುವಾರ) ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಅಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಎಸಿ ಕಾರ್ತಿಕ್ ಅವರು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಭರವಸೆಗಳಿಗೆ ಮಣಿಯದ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿವರೆಗೂ ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳೊಂದಿಗೆ ಕೂಗಿಕೊಂಡು ಬಂದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ವಾರದೊಳಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಷ್ಟೆಲ್ಲಾ ಆದರೂ ಕೂಡಾ ನಮಗೆ ಮೂಲಭೂತ ಸೌಲಭ್ಯ ಒದಗಿಸುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಸುಮೊಟೋ ಕೇಸು ದಾಖಲಿಸಿ : ವಕೀಲ ಡಾ. ಎಂ.ಸಿ.ನರಹರಿ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 01: ಸಂಸದ ಪ್ರಜ್ವಲ್ ರೇವಣ್ಣನಿಂದ ಅನೇಕರ ಮೇಲೆ ಅತ್ಯಾಚಾರ, ಲೈಂಗಿಕ ರಾಸಲೀಲೆ ಹಿನ್ನೆಲೆಯಲ್ಲಿ ಗಲ್ಲು

ಶುಕ್ರವಾರ ಮಧ್ಯರಾತ್ರಿ ಬೆಂಗಳೂರಿಗೆ ಬರುವ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರಾ..?

ಬೆಂಗಳೂರು: ರಾಜ್ಯದೆಲ್ಲೆಡೆ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವೇ ಸಾಕಷ್ಟು ಸದ್ದು ಮಾಡುತ್ತಿದೆ. ಸಾಮಾನ್ಯ ಜನರ ಮೊಬೈಲ್ ಗಳಲ್ಲೂ ಹೆಣ್ಣು ಮಕ್ಕಳ ಅಶ್ಲೀಲ ಫೋಟೋ ಓಡಾಡುತ್ತಿವೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆದರೆ ಪ್ರಜ್ವಲ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಹಾಗೂ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಾರ್ಮಿಕರ ದಿನಾಚರಣೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಕಾರ್ಮಿಕರ ಶ್ರಮವಿಲ್ಲದೆ ದೇಶ ಅಭಿವೃದ್ದಿಯಾಗಲು ಸಾಧ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್

error: Content is protected !!