Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನದ ಬೆಲೆಯಲ್ಲಿ ಸತತ ಏರಿಕೆ : ಇಂದಿನ ದರ ಎಷ್ಟಿದೆ..?

---Advertisement---

 

ಬೆಂಗಳೂರು: ಚಿನ್ನದ ದರ ಅದೇಕೋ ಇಳಿಕೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ.‌ ಒಂದೇ ಸಮನೆ ಏರಿಕೆಯತ್ತಲೇ ಸಾಗುತ್ತಿದೆ. ಇಂದು ಕೂಡ 25 ರೂಪಾಯಿ ಅಷ್ಟು ಏರಿಕೆಯಾಗಿದೆ. ನಿನ್ನೆ ಒಂದೇ ದಿನಕ್ಕೆ 100 ರೂಪಾಯಿ ಏರಿಕೆಯಾಗಿತ್ತು. ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ,  22 ಕ್ಯಾರಟ್ ನ ಒಂದು ಗ್ರಾಂ 7,930 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 8,651 ರೂಪಾಯಿ ಇದೆ. 22 ಕ್ಯಾರಟ್ ಹತ್ತು ಗ್ರಾಂಗೆ 79,300 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 86,510 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 79,300 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 79,450 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 76,450 ರೂಪಾಯಿ ಇದೆ. ಅಮೆರಿಕಾದಲ್ಲಿ 68,290 ಇದೆ. ಸೌದಿಯಲ್ಲಿ 76,320 ಇದೆ.

 

ಇನ್ನು ಬೆಳ್ಳಿ ಬೆಲೆ ಯಥಾಸ್ಥಿತಿಯನ್ನು ಕಾಪಾಡಿಕೊಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,950 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,950 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment