ಕೆಡಿ ದಿ ಡೆವಿಲ್ ಚಿತ್ರದ ‘ಸರ್ಸೆ ಸರ್ಸೆ’ ಹಾಡಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಅದರ ಹಿಂದಿ ಆವೃತ್ತಿಯನ್ನು ಹಾಡಿದ್ದ ಗಾಯಕಿ ಮಂಗಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡಿನ ಸಾಹಿತ್ಯ ಮತ್ತು ಪ್ರಸ್ತುತಿಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಬಳಿಕ, ಮಂಗ್ಲಿ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಸುದೀರ್ಘ ಸ್ಪಷ್ಟನೆ ನೀಡಿದ್ದು, “ಯಾರಿಗೂ ನೋವು ಮಾಡುವ ಉದ್ದೇಶ ಇರಲಿಲ್ಲ, ಅರಿವಿಲ್ಲದೆ ನಡೆದ ತಪ್ಪಿಗೆ ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.
ವಿವಾದದ ಹಿನ್ನೆಲೆ, ಈ ಹಾಡನ್ನು ಎಲ್ಲಾ ಡಿಜಿಟಲ್ ವೇದಿಕೆಗಳಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಾಡಿನ ಸಾಹಿತ್ಯವನ್ನು ತಿದ್ದುಪಡಿ ಮಾಡಲಾಗುತ್ತಿದ್ದು, ಪರಿಷ್ಕೃತ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.ಚಿತ್ರದ ನಾಯಕ ದ್ರುವ ಸರ್ಜಾ ಅಭಿನಯದ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದು, ಈ ವಿವಾದ ಚಿತ್ರದ ಪ್ರಚಾರದ ಮಧ್ಯೆ ಚರ್ಚೆಗೆ ಕಾರಣವಾಗಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಸೇರಿದಂತೆ ಚಿತ್ರತಂಡ ಮಂಗ್ಲಿಗೆ ಬೆಂಬಲ ಸೂಚಿಸಿದೆ.
ಹಾಡಿನ ಕೆಲವು ಪದಗಳು ಮತ್ತು ದೃಶ್ಯಗಳ ಕುರಿತು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದು, ಸಾಂಸ್ಕೃತಿಕ ಹಾಗೂ ಸಾಮಾಜಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ್ದರು. ಇದರ ಪರಿಣಾಮವಾಗಿ, ಹಾಡನ್ನು ಹಿಂತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ.ಒಟ್ಟಾರೆ, ಈ ಘಟನೆ ಚಿತ್ರರಂಗದಲ್ಲಿ ವಿಷಯ ಸಂವೇದನಾಶೀಲತೆ ಕುರಿತು ಮತ್ತೆ ಚರ್ಚೆ ಹುಟ್ಟುಹಾಕಿದ್ದು, ಭವಿಷ್ಯದಲ್ಲಿ ಇಂತಹ ವಿವಾದಗಳು ಮರುಕಳಿಸದಂತೆ ಎಚ್ಚರಿಕೆಯಿಂದ ನಡೆಯಬೇಕೆಂಬ ಅಭಿಪ್ರಾಯ ಕೇಳಿಬರುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










