Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ಸಮಾವೇಶ- ಸಚಿವ ಕೆ.ಎಸ್.ಈಶ್ವರಪ್ಪ

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಹಿಂದುಳಿದ ಸಮಾಜಗಳ ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಮಾಜಿ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ . ಇಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ವತಿಯಿಂದ ಬೆಂಗಳೂರಿನ ವಸಂತ್ ನಗರದ ಅಂಬೇಡ್ಕರ್ ಭವನ ದಲ್ಲಿ ಇಂದು ನಡೆದ ಕಾರ್ಯಕರ್ತರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಮ್ಮಿಕೊಳ್ಳಲಾಗಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ಸೇರಿ ಸುಮಾರು 2ರಿಂದ 2,500 ಜನರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೇಂ ದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಸೌಲಭ್ಯಗಳನ್ನು ನೀಡುತ್ತಿವೆ. ಅವುಗಳ ಬಗ್ಗೆ ತಿಳಿದುಕೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ತಿಳಿಸಿದರು. ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಗರಿಷ್ಠ ಸಂಖ್ಯೆಯ ಹಿಂದುಳಿದ ಸಮಾಜದವರು ಮತ್ತು ದಲಿತರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿ, ಇದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಸಮರ್ಪಿಸಿದರು.

ಬಿಜೆಪಿ ಹಿಂದೆಯೂ ಹಿಂದುಳಿದ ಸಮಾಜಗಳ ಮಠಗಳಿಗೆ 100 ಕೋಟಿ ಅನುದಾನ ನೀಡಿದೆ ಎಂದು ವಿವರಿಸಿದರು. ಇದರಿಂದ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್, ಆಸ್ಪತ್ರೆ ಸೇರಿದಂತೆ ವಿವಿಧ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳೂ ನಡೆದಿವೆ ಎಂದರು. ಹಿಂದುಳಿದ ಸಮಾಜ, ಜನಪ್ರತಿನಿಧಿಗಳು ಮತ್ತು ಸರಕಾರದ ನಡುವಿನ ಕೊಂಡಿಯಾಗಿ ಮೋರ್ಚಾ ಕೆಲಸ ಮಾಡಬೇಕು ಎಂದು ಅವರು ಆಶಿಸಿದರು. ಕುಟುಂಬ, ಜಾತಿಯ ಅಭಿವೃದ್ಧಿಯಿಂದ ಹಿಂದುತ್ವದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಜಾತಿಯ ಸಂಘಟನೆಗಳ ಸಮಾವೇಶದಲ್ಲಿ ಭಾಗವಹಿಸುವುದು ತಪ್ಪಲ್ಲ ಎಂದು ನುಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು

error: Content is protected !!